Friday, November 22 , 2019
ಈಗಿಂದೀಗಲೇ ರಾಜೀನಾಮೆ ಅಂಗೀಕಾರ ಅಸಾಧ್ಯ | ರಾಜೀನಾಮೆ ಬಗ್ಗೆ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತೇನೆ | ಸ್ಪೀಕರ್ ರಮೇಶ್ ಸ್ಪಷ್ಟನೆ

ಬೆಂಗಳೂರು(11.07.2019): ಮೈತ್ರಿ ಸರಕಾರದ ಶಾಸಕರ ರಾಜೀನಾಮೆಯನ್ನು ಈಗಿಂದೀಗಲೇ ಅಂಗೀಕಾರ ಮಾಡಲು ಸಾಧ್ಯವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸ್ಪಷ್ಟಪಡಿಸಿದರು.

ಆತುರಾತುರವಾಗಿ ಸ್ಪೀಕರ್ ಇಲ್ಲದ ಸಮಯದಲ್ಲಿ ರಾಜೀನಾಮೆ ನೀಡಿ, ಮುಂಬೈನ ಹೊಟೇಲ್ ನಲ್ಲಿ ತಲೆಮರೆಸಿಕೊಂಡಿದ್ದ ಮೈತ್ರಿ ಸರಕಾರದ ಶಾಸಕರು ಇಂದು ಸುಪ್ರೀಂ ಕೋರ್ಟ್ ಆದೇಶದಂತೆ ವಿಧಾನಸೌಧಕ್ಕೆ ಆಗಮಿಸಿ ಸ್ಪೀಕರ್ ಗೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದು, ಈ ರಾಜೀನಾಮೆಯನ್ನು ಸ್ವೀಕರಿಸಿದ ಸ್ಪೀಕರ್ ಬಳಿಕ ಪತ್ರಿಕಾಗೋಷ್ಠಿ ಕರೆದು ತಮ್ಮ ನಿರ್ಧಾರ ತಿಳಿಸಿದರು.

ಶಾಸಕರು ಸಂವಿಧಾನದ ಕಲಂ 190ರ ಪ್ರಕಾರ ಈಗ ಕ್ರಮಬದ್ಧವಾಗಿ ರಾಜೀನಾಮೆ ನೀಡಿದ್ದಾರೆ. ನಾನು ರಾಜೀನಾಮೆ ಸ್ವೀಕರಿಸಿದ್ದೇನೆ. ಆದರೆ, ಶಾಸಕರ ನಡೆ ಅನುಮಾನಗಳಿಗೆ ಕಾರಣವಾಗಿದ್ದು, ನಾನು ಇಲ್ಲದ ಸಮಯದಲ್ಲಿ ರಾಜೀನಾಮೆ ನೀಡಿ ಮುಂಬೈಗೆ ಹೋಗಿ ಪತ್ರಿಕಾಗೋಷ್ಠಿ ಮಾಡಿದ್ದಾರೆ. ಅವರು ಅಲ್ಲಿ ಏಕೆ ಹೋದರು? ಅಲ್ಲೇನು ನಡೆದಿದೆ ಎನ್ನುವುದು ಮುಖ್ಯವಾಗುತ್ತದೆ ಎಂದು ಸ್ಪೀಕರ್ ಹೇಳಿದರು.

ಶಾಸಕರು ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರಾ? ಎನ್ನುವ ಬಗ್ಗೆ ನಾನು ಯೋಚಿಸಬೇಕು. ಹಾಗಾಗಿ ನಾನು ಸರಿಯಾದ ತನಿಖೆ ನಡೆಸಿ, ಚಿಂತಿಸಿ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ ಎಂದು ಸ್ಪೀಕರ್ ರಮೇಶ್ ಸ್ಪಷ್ಟಪಡಿಸಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]