Tuesday, July 23 , 2019
ಪರಾರಿಯಾಗಿದ್ದ ಶಾಸಕರ ಆಗಮನದ ಬೆನ್ನಲ್ಲೇ ವಿಪ್ ಜಾರಿ | ಸರಕಾರದ ಪರ ಮತ ಚಲಾಯಿಸದಿದ್ದರೆ ಶಾಸಕ ಸ್ಥಾನದಿಂದ ಅನರ್ಹ

ಬೆಂಗಳೂರು(11.07.2019): ಮುಂಬೈನ ರೆಸಾರ್ಟ್ ನಲ್ಲಿ ತಲೆಮರೆಸಿಕೊಂಡಿದ್ದ ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಮುಂದೆ ಹಾಜರಾಗಿರುವ ಬೆನ್ನಲ್ಲೇ, ಮೈತ್ರಿ ಪಕ್ಷಗಳ ಶಾಸಕರಿಗೆ ಕರ್ನಾಟಕ ವಿಧಾನಸಭಾ ಮುಖ್ಯ ಸಚೇತಕ ಗಣೇಶ್ ಹುಕ್ಕೇರಿ ವಿಪ್ ಜಾರಿಗೊಳಿಸಿದ್ದಾರೆ.

ನಾಳೆಯಿಂದ ಆರಂಭವಾಗುವ ಅಧಿವೇಶನದಲ್ಲಿ ಭಾಗವಹಿಸ ಬೇಕು ಮತ್ತು ಸರಕಾರದ ಪರವಾಗಿ ಮತ ಚಲಾಯಿಸಬೇಕು. ನಿಯಮ ಉಲ್ಲಂಘಿಸಿದರೆ, ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗುವುದು ಎಂದು ವಿಪ್ ನಲ್ಲಿ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.

ಶಾಸಕರ ರಾಜೀನಾಮೆಯನ್ನು  ಸ್ಪೀಕರ್ ಇನ್ನೂ ಅಂಗೀಕರಿಸಿಲ್ಲ. ಈ ನಡುವೆ ವಿಪ್ ಜಾರಿಯಾಗಿದೆ. ರಾಜೀನಾಮೆ ನೀಡಿ ಪರಾರಿಯಾಗಿದ್ದ ಶಾಸಕರುಗಳಿಗೆ ಸಮ್ಮಿಶ್ರ ಸರಕಾರ ಪ್ರತಿನಿಧಿಗಳು ವಿಪ್ ಹೇಗೆ ತಲುಪಿಸಲು ಪ್ಲಾನ್ ಮಾಡಿದ್ದಾರೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಅಪಾಯಕಾರಿ ಅಣಕು ಕಾರ್ಯಾಚರಣೆಗಳಲ್ಲಿ ವಿದ್ಯಾರ್ಥಿಗಳನ್ನು ಬಳಕೆ..
ವಿಪತ್ತಿನ ಸಂದರ್ಭದಲ್ಲಿ ಅದರಿಂದ ಪಾರಾಗುವುದು ಹೇಗೆ ಎನ್ನುವುದರ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಒಳ್ಳೆಯ...