Tuesday, October 22 , 2019
ಕೊಳ್ಳೇಗಾಲ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಕಂಬಕ್ಕೆ ಕಟ್ಟಿಹಾಕಿ ಹೊಡೆದ ಸಾಲಗಾರರು | ಕರ್ನಾಟಕದಲ್ಲಿ ಮುಂದುವರಿದ ವಿಕೃತಿ

ಬೆಂಗಳೂರು(13.06.2019): ಸಾಲ ಮರುಪಾವತಿ ಮಾಡಲಿಲ್ಲ ಎಂದು ಆರೋಪಿಸಿ ಮಹಿಳೆಯೋರ್ವರನ್ನು ಕಂಬಕ್ಕೆ ಕಟ್ಟಿ ಹಾಕಿ ಅಮಾನವೀಯವಾಗಿ ಥಳಿಸಿದ ಘಟನೆ ಬೆಂಗಳೂರಿನ ಹೊರವಲಯದಲ್ಲಿ ನಡೆದಿದ್ದು, ಮಹಿಳೆಯನ್ನು ಬೆಳಗ್ಗಿನಿಂದಲೇ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಲಾಗಿದೆ ಎಂದು ವರದಿಯಾಗಿದೆ.

ಕೊಳ್ಳೇಗಾಲ ಮೂಲದ ಮಹಿಳೆ ರಾಜಮ್ಮ ಎಂಬವರು ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ರಾಜಮ್ಮ ತಮ್ಮ ಮಗಳ ಜೊತೆಗೆ ಕೊಡಿಗೆಹಳ್ಳಿಯಲ್ಲಿ ವಾಸಿಸುತ್ತಿದ್ದು, ಈ ಪ್ರದೇಶದಲ್ಲಿ ಸಣ್ಣ ಹೊಟೇಲ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ವ್ಯವಹಾರದಲ್ಲಿ ಅಷ್ಟೊಂದು ಲಾಭವಿಲ್ಲದ ಕಾರಣ ಅವರು ಕೆಲವರ ಬಳಿಯಲ್ಲಿ ಸಾಲ ಪಡೆದುಕೊಂಡಿದ್ದರು ಎಂದು ಹೇಳಲಾಗಿದೆ. ಸಾಲಗಾರರು ಸಾಲ ತೀರಿಸುವಂತೆ ನಿರಂತರವಾಗಿ ಪೀಡಿಸುತ್ತಿದ್ದು, ಇದರಿಂದಾಗಿ ಅವರು ತಿಂಗಳ ಹಿಂದೆ ಮನೆ ಖಾಲಿ ಮಾಡಿ ಊರಿಗೆ ಹಿಂದಿರುಗಿದ್ದರು. ಇಂದು ಬೆಳಗ್ಗೆ ಮತ್ತೆ ಅವರು ಕೊಡಿಗೆಹಳ್ಳಿಗೆ ಬಂದಾಗ ಸಾಲಗಾರರು ಅವರನ್ನು ಕಂಬಕ್ಕೆ ಕಟ್ಟಿ ಹಾಕಿ ಮಹಿಳೆ ಎನ್ನುವುದನ್ನೂ ನೋಡದೆ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಿಳೆಯನ್ನು ಬೆಳಗ್ಗಿನಿಂದಲೇ ಕಂಬಕ್ಕೆ ಕಟ್ಟಿಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಲಾಗಿದೆ. ಘಟನೆ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ನ್ಯೂಸ್ 18 ವರದಿ ಮಾಡಿದೆ. ಇತ್ತೀಚೆಗಷ್ಟೇ ದೇವಸ್ಥಾನಕ್ಕೆ ಪ್ರವೇಶಿಸಿದ ಎನ್ನುವ ಕಾರಣಕ್ಕೆ ಗುಂಡ್ಲುಪೇಟೆಯಲ್ಲಿ ದಲಿತ ಯುವಕನನ್ನು ಅಮಾನವೀಯವಾಗಿ ಥಳಿಸಿ ಬೆತ್ತಲೆ ಮೆರವಣಿಗೆ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇದೀಗ ಮಹಿಳೆಯನ್ನು ಕಟ್ಟಿ ಹಾಕಿ ಹೊಡೆದಿರುವ ಘಟನೆ ನಡೆದಿದೆ. ಕರ್ನಾಟಕದಲ್ಲಿ ಇಂತಹ ಪ್ರಕರಣಗಳು ಒಂದರ ಹಿಂದೊಂದರಂತೆ ನಡೆಯುತ್ತಿದ್ದು, ರಾಜ್ಯ ಸರಕಾರ ತಕ್ಷಣವೇ ಇದರ ಬಗ್ಗೆ ಕ್ರಮಕೈಗೊಳ್ಳುವ ಅಗತ್ಯವಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]