Sunday, May 31 , 2020
ಸಿಎಂ ಯೋಗಿಗೆ ಮುಖಭಂಗ | ಬಂಧಿಸಿರುವ ಪತ್ರಕರ್ತನನ್ನು ಬಿಡುಗಡೆಗೊಳಿಸಲು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ(11.06.2019): ಸಾಮಾಜಿಕ ಜಾಲತಾಣದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಬಗ್ಗೆ ಪೋಸ್ಟ್ ಹಾಕಿರುವ ಸಂಬಂಧ ಬಂಧಿಸಲಾಗಿರುವ ಪತ್ರಕರ್ತನನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದ್ದು, ಯೋಗಿ ಆದಿತ್ಯನಾಥ್ ಗೆ ತೀವ್ರ ಮುಖಭಂಗವಾಗಿದೆ.

ಸಾಮಾಜಿಕ ಜಾಲತಾಣಗಳ ಪೋಸ್ಟ್ ಗೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯನ್ನು ಹನ್ನೊಂದು ದಿನಗಳವರೆಗೆ ಜೈಲಿನಲ್ಲಿ ಬಂಧಿಸಿರಿಸಿಕೊಳ್ಳುವಂತಿಲ್ಲ. ಇದೇನೂ ಕೊಲೆ ಪ್ರಕರಣವಲ್ಲ ಅಲ್ವಾ? ಎಂದು ಸುಪ್ರೀಂ ಕೋರ್ಟ್ ಯೋಗಿ ಸರಕಾರಕ್ಕೆ ಆರತಿ ಎತ್ತಿದೆ.

ಯೋಗಿ ಆದಿತ್ಯನಾಥ್ ಗೆ ಮಹಿಳೆಯೊಬ್ಬರು ಮದುವೆ ಪ್ರಸ್ತಾಪವನ್ನಿಟ್ಟು ಸಿಎಂ ಕಚೇರಿ ಮುಂದೆ ಮಾಧ್ಯಮಗಳ ಜೊತೆ ಮಾತನಾಡುತ್ತಿರುವ ವಿಡಿಯೋವನ್ನು ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರು ತಮ್ಮ ಫೇಸ್ ಬುಕ್ ಹಾಗೂ ಟ್ವಿಟ್ಟರ್‍ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಅವರನ್ನು ಪೊಲೀಸರು ಬಂಧಿಸಿದ್ದರು.

ಇನ್ನೂ ಪತ್ರಕರ್ತನ ಬಂಧನಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದಲ್ಲಿ ವಿಪಕ್ಷಗಳು ಸರಕಾರವನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿದ್ದವು. ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರೂ ಯೋಗಿ ಸರಕಾರದ ಈ ಕ್ರಮದ ವಿರುದ್ಧ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]