Saturday, September 21 , 2019
ಮಲ್ಪೆ ಬಂದರ್ ನಲ್ಲಿ ಝಲಪಿಸಿದ ತಲವಾರು | ನಾಲ್ವರು ದುಷ್ಕರ್ಮಿಗಳಿಂದ ಯುವಕನ ಕೊಲೆಗೆ ಯತ್ನ

ಮಲ್ಪೆ(07.06.2019):  ಮಲ್ಪೆ ಮೀನುಗಾರಿಕಾ ಬಂದರ್ ನಲ್ಲಿ ತಲವಾರುಗಳು ಝಲಪಿಸಿದ್ದು, ಯುವಕನೋರ್ವನ ಹತ್ಯೆಗೆ ನಾಲ್ವರು ದುಷ್ಕರ್ಮಿಗಳು ಯತ್ನಿಸಿದ ಘಟನೆ ಇಂದು ಮುಂಜಾನೆ ನಡೆದಿದೆ.

ಫರಂಗಿಪೇಟೆ ನಿವಾಸಿ ರಿಯಾಝ್(34) ಹಲ್ಲೆಗೊಳಗಾದವರಾಗಿದ್ದಾರೆ. ಶುಕ್ರವಾರ ಬೆಳಗ್ಗೆ ಇವರು ಇತರ ಮೂವರೊಂದಿಗೆ ಮೀನನ ವಾಹನದಲ್ಲಿ ಮಲ್ಪೆ ಬಂದರ್ ಗೆ ಬಂದಿದ್ದರು. ಬಂದರ್ ನಲ್ಲಿ ವಾಹನ ನಿಲ್ಲಿಸಿದ ಬಳಿಕ ರಿಯಾಝ್ ವಾಹನದಿಂದ ಇಳಿದಿದ್ದಾರೆ. ಇತರ ಮೂವರು ವಾಹನದಲ್ಲೇ ಮಲಗಿದ್ದರು. ಈ ವೇಳೆ ಏಕಾ ಏಕಿ ನಾಲ್ವರು ದುಷ್ಕರ್ಮಿಗಳು ತಲವಾರಿನಿಂದ ರಿಯಾಝ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ದುಷ್ಕರ್ಮಿಗಳು ಮಂಗಳೂರಿನಿಂದಲೇ ಮೀನಿನ ವಾಹನವನ್ನು ಹಿಂಬಾಳಿಸಿಕೊಂಡು ಬಂದಿದ್ದರು ಎಂದು ಹೇಳಲಾಗಿದೆ. ಇದೀಗ ತೀವ್ರವಾಗಿ ಗಾಯಗೊಂಡಿರುವ ರಿಯಾಝ್ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಡುಪಿ ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್, ಎಸ್ ಐ ಮಧು ಆಸ್ಪತ್ರೆಗೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಕನ್ನಡ ಉಳಿಸುವ ಜವಾಬ್ದಾರಿ ಬಡ ಮಕ್ಕಳಿಗೆ..
ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಆದೇಶವನ್ನು ಹಿಂಪಡೆಯಲು ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ...
POLL

[democracy id="1"]