Monday, March 8 , 2021
ಅಂಗಾಂಗ ದಾನ ಮಾಡಿ ಸಾವಿನಲ್ಲೂ ಮಾನವೀಯತೆ ಮೆರೆದ ಯುವಕ

ಚನ್ನಪಟ್ಟಣ (14-01-2021): ರಸ್ತೆ ಅಪಘಾತಕ್ಕೀಡಾಗಿ ಖಾಸಗಿ  ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ತನ್ನ ಸಾವು ಸಮೀಪಿಸುತ್ತಿದೆ ಎಂಬುದನ್ನು ಅರಿತು ಒಂಭತ್ತು ಜನರಿಗೆ ತನ್ನ ಅಂಗಾಂಗಗಳನ್ನು ದಾನ ಮಾಡಿ ಸಾವಿನಲ್ಲೂ ಮಾನವೀಯತೆ ಮೆರೆದಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.

ತಾಲ್ಲೂಕಿನ ಜೆ.ಬ್ಯಾಡರಹಳ್ಳಿ ಗ್ರಾಮದ ಯುವಕ ಇಪ್ಪತ್ತಾರು ವರ್ಷದ ಪ್ರಸನ್ನ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಬೆಂಗಳೂರು-ಮೈಸೂರು ರಸ್ತೆಯ ಕೆಂಗಲ್ ಬಳಿ ಕಾರೊಂದು ಡಿಕ್ಕಿ ಹೊಡೆದಿದೆ. ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಿದರೂ ಸಹ ಫಲಕಾರಿಯಾಗಲಿಲ್ಲ. ಈ ಸಂದರ್ಭದಲ್ಲಿ ಆ ಯುವಕ ತನ್ನ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರಿದಿದ್ದಾನೆ. ಈ ಮೂಲಕ ಯುವಕನ ದೇಹದ 9 ವಿವಿಧ ಅಂಗಾಂಗಗಳನ್ನು ದಾನ ಮಾಡಿ ಒಂಬತ್ತು ಜನರ ಜೀವವನ್ನು ಉಳಿಸಿದ್ದಾನೆ.

ತನ್ನ ಮಗನ ಸಾವಿನಲ್ಲೂ ಅಂಗಾಂಗಗಳನ್ನು ದಾನ ಮಾಡುವ ಇಂತಹ ಮಹತ್ವದ ನಿರ್ಧಾರವನ್ನು ತೆಗೆದುಕೊಂಡ ಅವರ ಕುಟುಂಬವನ್ನು ನೋವಿನ ನಡುವೆಯೂ ಜನತೆ ಮನಸಾರೆ ಹರಸುತ್ತಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]