Saturday, April 4 , 2020
ಅಮೂಲ್ಯಗೆ ಜಾಮೀನು ನೀಡಿದರೆ ಗುಂಡಿಟ್ಟು ಹತ್ಯೆ | ನ್ಯಾಯಾಲಯಕ್ಕೆ ಶ್ರೀರಾಮಸೇನೆ ಬ್ಲ್ಯಾಕ್ ಮೇಲ್ | ಅಮೂಲ್ಯ ಹತ್ಯೆಗೆ 10 ಲಕ್ಷ ಸುಪಾರಿ

ಬಳ್ಳಾರಿ(22.02.2020): ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಿಎಎ ವಿರುದ್ಧದ ಪ್ರತಿಭಟನಾ ಸಭೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಹಾಕಿದ ಆರೋಪದಲ್ಲಿ ಬಂಧಿತರಾಗಿರುವ ವಿದ್ಯಾರ್ಥಿನಿ ಅಮೂಲ್ಯಗೆ ಜಾಮೀನು ನೀಡದಂತೆ ನ್ಯಾಯಾಲಯಕ್ಕೆ ಬ್ಲ್ಯಾಕ್ ಮೇಲ್ ಮಾಡಲಾಗಿದ್ದು, ಅಮೂಲ್ಯರನ್ನು ಬಿಡುಗಡೆ ಮಾಡಿದರೆ, ಆಕೆಯನ್ನು ಗುಂಡಿಟ್ಟು ಹತ್ಯೆ ಮಾಡುತ್ತೇವೆ ಎಂದು  ಶ್ರೀರಾಮಸೇನೆಯ ತಾಲೂಕು ಅಧ್ಯಕ್ಷ ಸಂಜೆಯ್ ಮರೊಡಿ ನ್ಯಾಯಾಲಯಕ್ಕೆ ಬೆದರಿಕೆ ಹಾಕಿದ್ದಾರೆ.

ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಅಮೂಲ್ಯಳನ್ನು ಗುಂಡಿಟ್ಟು ಹತ್ಯೆ ಮಾಡುವವರಿಗೆ 10 ಲಕ್ಷ ರೂಪಾಯಿ ಸುಪಾರಿ ಘೋಷಿಸಿದ್ದಾರೆ. ಇದೊಂದು ಗಂಭೀರವಾದ ಪ್ರಕರಣವಾಗಿದ್ದರೂ ರಾಜ್ಯ ಗೃಹ ಇಲಾಖೆಯ ಮೌನ ಅನುಮಾನಕ್ಕೆ ಕಾರಣವಾಗಿದ್ದು, ಹತ್ಯೆಗೆ ಪ್ರಚೋದನೆ ನೀಡುವ ವ್ಯಕ್ತಿಗಳನ್ನು ರಾಜ್ಯ ಸರ್ಕಾರ ಪೋಷಿಸುವುದು ಸರಿಯೇ? ಎನ್ನುವ ಪ್ರಶ್ನೆಗಳಿಗೆ ಕಾರಣವಾಗಿದೆ.

ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತು ಆರಂಭಿಸಿದ್ದ ಅಮೂಲ್ಯ, ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯನ್ನು ಕೂಗಿದರು. ಆ ಬಳಿಕ ಹಿಂದೂಸ್ತಾನ್ ಜಿಂದಾಬಾದ್ ಕೂಗಿದ್ದರು. ಈ ವೇಳೆ ಸಂಘಟಕರು ಅವರಿಗೆ ಮಾತನಾಡಲು ಅವಕಾಶ ನೀಡದೇ, ವೇದಿಕೆಯಿಂದ ಹೊರದಬ್ಬಿದ್ದರು. ಇದಾದ ಬಳಿಕ “ನಾನು ಪಾಕಿಸ್ತಾನ ಜಿಂದಾಬಾದ್ ಹಾಗೂ ಹಿಂದೂಸ್ತಾನ್ ಜಿಂದಾಬಾದ್ ನಡುವಿನ ವ್ಯತ್ಯಾಸವನ್ನು ಹೇಳಲು ಹೊರಟಿದ್ದೆ, ಈ ಸಂದರ್ಭದಲ್ಲಿ ನನಗೆ ಮಾತನಾಡಲು ಅವಕಾಶ ನೀಡದೇ ನನ್ನ ಕೈಯಲ್ಲಿದ್ದ ಮೈಕ್ ಕಸಿದುಕೊಳ್ಳಲಾಗಿದೆ” ಎಂದು ಅಮೂಲ್ಯ ಹೇಳಿಕೆ ನೀಡಿದ್ದರು.

ಪಾಕಿಸ್ತಾನ ಜಿಂದಾಬಾದ್ ಘೋಷಣೆಯ ನಂತರ ಅಮೂಲ್ಯರನ್ನು ಯಾರೂ ಸಮರ್ಥಿಸಿಕೊಂಡಿಲ್ಲ. ಜೊತೆಗೆ ಈ ಬಗ್ಗೆ ತನಿಖೆ ನಡೆಸಿ, ಆಕೆ ಯಾಕೆ ಆ ಘೋಷಣೆ ಕೂಗಿದಳು ಎನ್ನುವ ವಿಚಾರದ ಸತ್ಯಾಂಶ ಹೊರಬರಬೇಕು ಎಂದು ಸಿಎಎ ವಿರೋಧಿ ಹೋರಾಟಗಾರರು ಹಾಗೂ ಪ್ರಗತಿಪರ ಚಿಂತಕರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಎಲ್ಲಿಯೂ ಯಾರೂ ಈಕೆಯನ್ನು ಬೆಂಬಲಿಸಿ ಮಾತನಾಡದ ಕಾರಣ, ಬಲಪಂಥೀಯ ಸಂಘಟನೆಗಳಿಗೆ ಇದೊಂದು ಹಿನ್ನಡೆಯಾಗಿದ್ದು, ಇದೀಗ ಜನರನ್ನು ಪ್ರಚೋದಿಸುವ ಮೂಲಕ ಅಮೂಲ್ಯ ಅವರನ್ನು ಬೆಂಬಲಿಸಿ ಹೇಳಿಕೆಗಳು ಬರಲಿ ಎನ್ನುವ ಉದ್ದೇಶದಿಂದ ಈ ರೀತಿಯ ಹೇಳಿಕೆಗಳನ್ನು ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕ ಎನ್ನುವಂತೆ ಬೇಜಾವಾಬ್ದಾರಿಯುತ ಸ್ವಾಮೀಜಿಯೋರ್ವ, ಅಮೂಲ್ಯ ಪ್ರಕರಣವನ್ನು ಗೌರಿ ಲಂಕೇಶ್ ಪ್ರಕರಣಕ್ಕೆ ಲಿಂಕ್ ಮಾಡಿ ಮಾತನಾಡಿದ್ದು, ಇವೆಲ್ಲವೂ ವ್ಯವಸ್ಥಿತ ಷಡ್ಯಂತ್ರವಾಗಿದ್ದು, ಇದರ ಹಿಂದೆ ರಾಜಕಾರಣಿಗಳ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]