Sunday, May 9 , 2021
ಈ ವಾರ ಕೂಡ ಕಿಚ್ಚನ ಪಂಚಾಯಿತಿ ಇರಲ್ಲ! ಬಿಗ್ ಬಾಸ್ ತಂಡ ಕೊಟ್ಟ ಕಾರಣ ಇದು

ರಾಷ್ಟ್ರಧ್ವನಿ ಡೆಸ್ಕ್ (30-04-2021): ಕನ್ನಡದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ನಲ್ಲಿ ಪ್ರತಿ ಶನಿವಾರ, ಭಾನುವಾರ ಕಿಚ್ಚಾ ಸುದೀಪ್ ‘ಕಿಚ್ಚನ ಪಂಚಾಯತಿ’ ಎಂಬ ಕಾರ್ಯಕ್ರಮ ನಡೆಸಿಕೊಡುತ್ತಿದ್ದರು.

ಸದ್ಯ ಕಳೆದ ಎರಡು ವಾರಗಳಿಂದ ಈ ಕಾರ್ಯಕ್ರಮ ಪ್ರಸಾರ ಆಗಿರಲಿಲ್ಲ. ಕಾರಣ ಕಿಚ್ಚ ಸುದೀಪ್ ಅವರಿಗೆ ಅನಾರೋಗ್ಯ ಸಮಸ್ಯೆಯಾಗಿತ್ತು. ಹಾಗಾಗಿ ಅವರು ಎರಡೂ ವಾರಗಳ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿರಲಿಲ್ಲ. ನಂತರ ತಾನು ಗುಣಮುಖರಾಗಿದ್ದು  ಈ ವಾರ ಬಿಗ್ ಬಾಸ್ ನಲ್ಲಿ ಭಾಗವಹಿಸುವೆ ಎಂದು ಸ್ವತಃ ಸುದೀಪ್ ಟ್ವೀಟ್ ಸಹ ಮಾಡಿದ್ದರು.

ಆದರೆ ಕಲರ್ಸ್ ಕನ್ನಡ ವಾಹಿನಿಯು ತನ್ನ ಅಧಿಕೃತ ಫೇಸ್‌ಬುಕ್‌ ಪೇಜ್ ನಲ್ಲಿ ಇದಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದನ್ನು ಪ್ರಕಟಿಸಿದೆ. ಅದರಂತೆ ಸದ್ಯ ಇರುವ ಸಂಕಷ್ಟದ ಸನ್ನಿವೇಶದ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್  ನಡೆಸಿಕೊಡಬೇಕಿದ್ದ ವಾರಾಂತ್ಯದ ಪಂಚಾಯ್ತಿ ಚಿತ್ರೀಕರಣ ನಡೆಯುತ್ತಿಲ್ಲ. ಹೀಗಾಗಿ ಈ ವಾರವೂ ಬಿಗ್ ಬಾಸ್ ವಾರಾಂತ್ಯದ ಸಂಚಿಕೆಗಳಲ್ಲಿ ಕಿಚ್ಚ ಸುದೀಪ್ ಅವರ ಉಪಸ್ಥಿತಿ ಇರುವುದಿಲ್ಲ ಎಂದು ತಿಳಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]