Saturday, April 4 , 2020
ಕನ್ನಡದಲ್ಲಿ ‘ಭಾರತದ ಸಂವಿಧಾನ’ ಕೃತಿ ಲೋಕಾರ್ಪಣೆ

ಬೆಂಗಳೂರು(21.02.2020): ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ, ಹಿರಿಯ ವಕೀಲರೂ ಆಗಿರುವ ಡಾ.ಸಿ.ಎಸ್.ದ್ವಾರಕಾನಾಥ್ ಅವರು  ಸಂಗ್ರಹಿಸಿ, ಸಂಪಾದಿಸಿ, ಪರಿಷ್ಕರಣೆ ನಡೆಸಿ ಕನ್ನಡದಲ್ಲಿ ಭಾರತ ಸಂವಿಧಾನದ ಕೃತಿಯನ್ನು ಬರೆದಿದ್ದು ಗುರುವಾರ ಈ ಕೃತಿಯನ್ನು ಲೋಕಾರ್ಪಣೆ ಮಾಡಲಾಯಿತು.

ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಈ ಕೃತಿಯನ್ನು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಹಿಸಿದ್ದರು.

ಈ ಸಂದರ್ಭದಲ್ಲಿ ಡಿಸಿಎಂ, ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಕಾರಜೋಳ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕಾನಾಥ್, ಚಿತ್ರ ನಟ, ಸಾಮಾಜಿಕ ಹೋರಾಟಗಾರ ಚೇತನ್ ಮೊದಲಾದವರು ಉಪಸ್ಥಿತರಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]