Friday, March 5 , 2021
ವಿಧಾನಸಭಾ ಕಲಾಪದಲ್ಲಿ ಸಿಎಂಗಿಲ್ಲ ಸಚಿವರ ಸಪೋರ್ಟ್: ಖಾತೆ ಬದಲಾವಣೆಯಿಂದ ಮೌನಕ್ಕೆ ಶರಣಾದ ಸಚಿವರು!?

ಬೆಂಗಳೂರು (05-02-2021): ರಾಜ್ಯ ವಿಧಾನ ಸಭೆಯಲ್ಲಿ ಕಲಾಪಗಳು ಆರಂಭವಾಗಿದೆ. ವಿರೋಧ ಪಕ್ಷದ ನಾಯಕರು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದ್ದರೂ ಬಸವರಾಜ್ ಬೊಮ್ಮಾಯಿಯವರನ್ನು ಹೊರತು ಪಡಿಸಿ ಬೇರೆ ಯಾವ ಸಚಿವರು ಸರ್ಕಾರದ ಪರವಾಗಿ ಮುಖ್ಯಮಂತ್ರಿಗಳ ಪರವಾಗಿ ನಿಲ್ಲುತ್ತಿಲ್ಲ.

ಈ ಸರ್ಕಾರ ಪ್ರಾರಂಭವಾದಾಗ ಮಾಧುಸ್ವಾಮಿಯವರು ವಿರೋಧ ಪಕ್ಷದ ಎಲ್ಲಾ ನಾಯಕರನ್ನು ಎದುರಿಸಿ ಸಮರ್ಥವಾಗಿ ಉತ್ತರಿಸುತ್ತಿದ್ದರು. ನಂತರ ಡಾ. ಸುಧಾಕರ್ ಅವರು ಸಹ ಸರ್ಕಾರದ ಪರವಾಗಿ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದರು. ಇದರಿಂದ ಮುಖ್ಯಮಂತ್ರಿಗಳು ನಿರಾಳವಾಗಿರುತ್ತಿದ್ದರು.

ಮುಖ್ಯಮಂತ್ರಿಗಳು ಖಾತೆಗಳನ್ನು ಬದಲಾವಣೆ ಮಾಡಿದ ಮೇಲೆ ಮುಖ್ಯಮಂತ್ರಿಗಳ ಮೇಲೆ ಮುನಿಸಿಕೊಂಡಿದ್ದವರಲ್ಲಿ ಮಾಧುಸ್ವಾಮಿ ಮತ್ತು ಡಾ.ಸುಧಾಕರ್ ಪ್ರಮುಖರು. ಆದ್ಧರಿಂದ ವಿರೋಧ ಪಕ್ಷಗಳು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರೂ ಸಹ ಕೆಲವು ‌ಸಚಿವರು ಮೌನಕ್ಕೆ ಶರಣಾಗಿದ್ದಾರೆ. ಇದು ಮುಖ್ಯಮಂತ್ರಿಗಳಿಗೆ ಬಹಳ ತಲೆ ನೋವಿನ ಸಂಗತಿಯಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]