Sunday, May 9 , 2021
ಕಾಂಗ್ರೆಸ್ ಗೆ ಮತ್ತೊಂದು ಆಘಾತ: ಫಲಿತಾಂಶಕ್ಕೂ ಮುನ್ನ ರಾಮನಗರ ನಗರಸಭೆ ಅಭ್ಯರ್ಥಿ ಕೊರೋನಾಗೆ ಬಲಿ

ರಾಮನಗರ (29-04-2021): ರಾಮನಗರ ನಗರಸಭೆಯ ಅಭ್ಯರ್ಥಿಯೊಬ್ಬರು ಚುನಾವಣೆ ಮುಗಿದು ಫಲಿತಾಂಶ ಬರುವ ಮುನ್ನವೇ ಕ್ರೂರಿ ಕೊರೋನಾಗೆ ಬಲಿಯಾಗಿದ್ದಾರೆ.

ರಾಮನಗರ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಲೀಲಾ ಗೋವಿಂದರಾಜು ಮೃತಪಟ್ಟ ಅಭ್ಯರ್ಥಿಯಾಗಿದ್ದಾರೆ. ಇವರು ನಗರದ ನಾಲ್ಕನೇ ವಾರ್ಡ್ ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಗೆಲ್ಲುವ ಅಭ್ಯರ್ಥಿ ಎಂದೇ ವಾರ್ಡ್ ನಲ್ಲಿ ಬಿಂಬಿತರಾಗಿದ್ದ ಲೀಲಾ ಗೋವಿಂದರಾಜು ರವರು ಚುನಾವಣಾ ಪ್ರಚಾರದಲ್ಲಿಯೂ ಭಾಗಿಯಾಗಿದ್ದರು. ಆನಂತರದ ಕೆಲವೇ ದಿನಗಳಲ್ಲಿ ಕೊರೋನಾ ಉಲ್ಬಣಗೊಂಡು ಮರಣ ಹೊಂದಿದ್ದಾರೆ. ಇದು ಚುನಾವಣಾ ಫಲಿತಾಂಶಕ್ಕೂ ಮುನ್ನವೇ ರಾಮನಗರ ಕಾಂಗ್ರೆಸ್ ಪಾಳಯಕ್ಕೆ ಆಘಾತ ಉಂಟು ಮಾಡಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]