Monday, July 26 , 2021
ಕಾಂಗ್ರೆಸ್-ಬಿಜೆಪಿ ತೊರೆದು ಜೆಡಿಎಸ್ ಗೆ ನಾಯಕರು ಸೇರ್ಪಡೆಯಾಗುತ್ತಿರುವುದರ ಹಿಂದಿನ ರಹಸ್ಯ ಏನು ?

ಬೆಂಗಳೂರು(04.05.2018): ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜಕೀಯ ಪಕ್ಷಗಳು ತಮ್ಮ ಅಧಿಕಾರವನ್ನು ಕರ್ನಾಟಕದಲ್ಲಿ ಸ್ಥಾಪಿಸಲು ಇನ್ನಿಲ್ಲದ ಶ್ರಮಪಡುತ್ತಿದೆ. ಈ ನಡುವೆ ಹಲವು ಸುತ್ತಿನ ಪಕ್ಷಾಂತರ ಪರ್ವವೂ ಮುಗಿದು ಹೋಗಿದೆ. ಆದರೆ ಈ ಬಾರಿಯ ಪಕ್ಷಾಂತರ ವಿಶಿಷ್ಟವಾಗಿತ್ತು.

ಈ ಹಿಂದಿನ ಚುನಾವಣೆಗಳಲ್ಲಿ ಬಹುತೇಕ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುವುದು ಮತ್ತು ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಸೇರುವುದು ಸಾಮಾನ್ಯವಾಗಿತ್ತು. ಆದರೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಜೆಡಿಎಸ್ ಗೆ ನಾಯಕರು ಅತೀ ಹೆಚ್ಚು ಸಂಖ್ಯೆಯಲ್ಲಿ ಸೇರ್ಪಡೆಗೊಂಡಿರುವುದು ವಿಶೇಷವಾಗಿತ್ತು.

ಕಾಂಗ್ರೆಸ್ ನ ಅಂಬರೀಶ್ ರಂತಹ ನಾಯಕರೂ ಜೆಡಿಎಸ್ ಗೆ ಬೆಂಬಲವನ್ನು ಸೂಚಿಸಲು ತಮಗೆ ದೊರೆತ ಟಿಕೆಟ್ ನ್ನು ತ್ಯಜಿಸಿರುವುದು ಇಲ್ಲಿ ಬಹಳ ಗಮನಾರ್ಹ ಅಂಶವಾಗಿದೆ. ರಾಜ್ಯದಲ್ಲಿ ಬಿಎಸ್ಪಿ ಮತ್ತು ಜೆಡಿಎಸ್ ನ ಮೈತ್ರಿ ರಾಜ್ಯ ರಾಜಕಾರಣದಲ್ಲಿ ಭಾರೀ ತಿರುವನ್ನುಂಟು ಮಾಡಿತೆಂದರೆ ತಪ್ಪಾಗಲಾರದು. ಬಿಎಸ್ಪಿ ಎಲ್ಲಿ ಅಭ್ಯರ್ಥಿಗಳನ್ನು ಹಾಕಿದೆಯೋ ಅಲ್ಲಿ ಕಾಂಗ್ರೆಸ್ ಗೆಲುವು ಅಷ್ಟು ಸುಲಭವಲ್ಲ ಎಂಬ ಮಾತುಗಳು ಬಿಜೆಪಿ ವಲಯದಿಂದ ಕೇಳಿ ಬಂದಿರುವುದೂ ಒಂದು ಅಚ್ಚರಿಯ ವಿಚಾರವಾಗಿದೆ.

ರೈತರ ಪರ ಧ್ವನಿಯೆತ್ತಿದ ಜೆಡಿಎಸ್

ಕಾಂಗ್ರೆಸ್ ಮತ್ತು ಬಿಜೆಪಿ ಧಾರ್ಮಿಕತೆ, ಕೋಮುವಾದ, ಹಿಂದೂ ಮುಸ್ಲಿಂ, ದಲಿತ-ಬಲಿತ ಮೊದಲಾದ ವಿಚಾರಗಳನ್ನು ಮುಂದಿಟ್ಟುಕೊಂಡು ತಮ್ಮ ಮೊದಲ ಹಾಗೂ ಎರಡನೆಯ ಹಂತದ ಪ್ರಚಾರವನ್ನು ರಾಜ್ಯದಲ್ಲಿ ನಡೆಸಿದ್ದವು.  ಆದರೆ ಜೆಡಿಎಸ್ ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಆರಂಭದಲ್ಲಿಯೇ ರೈತರ ಪರವಾಗಿ ಧ್ವನಿಯೆತ್ತಿತು. ನಾವು ಅಧಿಕಾರಕ್ಕೆ ಬಂದ ತಕ್ಷಣ ರೈತರ ಸಾಲವನ್ನು ಮನ್ನಾ ಮಾಡುತ್ತೇವೆ ಎಂದು ಕುಮಾರಸ್ವಾಮಿ ಘೋಷಿಸಿದರು. ಇದು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನವನ್ನು ಮೂಡಿಸಿತು.

ಕಾಂಗ್ರೆಸ್-ಬಿಜೆಪಿಗೆ ಜ್ಞಾನೋದಯ

ಜೆಡಿಎಸ್ ಯಾವುದೇ ಪಕ್ಷಗಳನ್ನು ನೇರವಾಗಿ ಗುರಿ ಮಾಡಿ ಈ ಬಾರಿಯ ಚುನಾವಣೆಯಲ್ಲಿ ಪ್ರಚಾರ ಮಾಡಲಿಲ್ಲ. ಜೆಡಿಎಸ್ ಮತ್ತು ಬಿಎಸ್ಪಿಯ ಮೈತ್ರಿಯನ್ನು ಗೆಲ್ಲಿಸುವುದೇ ತನ್ನ ಗುರಿ ಪಕ್ಷದ ವರಿಷ್ಠ ದೇವೇಗೌಡ, ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆರಂಭದಲ್ಲಿಯೇ ಘೋಷಿಸಿಕೊಂಡಿದ್ದರು. ಅಂತೆಯೇ ಬಿಎಸ್ಪಿಯ ಬಲವನ್ನು ಪಡೆದ ಜೆಡಿಎಸ್ ತನ್ನ ಒಂದೊಂದು ಸಭೆಯಲ್ಲಿಯೂ ಲಕ್ಷಾಂತರ ಜನರನ್ನು ಸೇರಿಸುವ ಮೂಲಕ ಕಾಂಗ್ರೆಸ್ ಮತ್ತು ಬಿಜೆಪಿಗೆ ಬಿಗ್ ಶಾಕ್ ನೀಡಿತ್ತು. ಕುಮಾರಸ್ವಾಮಿಯವರ ರೈತಪರ ಹೇಳಿಕೆಗಳು ಬಿಗ್ ಹಿಟ್ ಆಗುತ್ತಿದ್ದಂತೆಯೇ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ತಮ್ಮ ಪ್ರಚಾರ ಸಭೆಯಲ್ಲಿ ರೈತರ ಬಗ್ಗೆ ಮಾತನಾಡಲು ಆರಂಭಿಸಿದರು.

ಜೆಡಿಎಸ್ ನ್ನು ಮಣಿಸಲು ಮೋದಿ ಗಿಮಿಕ್

ರಾಜ್ಯದಲ್ಲಿ ಕಾಂಗ್ರೆಸ್ಸನ್ನೇ ಗುರಿಯಾಗಿಸಿ ಭಾಷಣ ಮಾಡುತ್ತಿದ್ದ ಪ್ರಧಾನಿ ಮೋದಿ ಇತ್ತೀಚೆಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ಅವರನ್ನು ಹೊಗಳಿ ಅಚ್ಚರಿ ಮೂಡಿಸಿದ್ದರು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಗಿಂತಲೂ ಜೆಡಿಎಸ್ ನ ಶಕ್ತಿ ಏನೂ ಕಡಿಮೆ ಇಲ್ಲ ಎನ್ನುವುದು ಅರಿವಾಗುತ್ತಿದ್ದಂತೆಯೇ ಜೆಡಿಎಸ್ ವಿರುದ್ಧ ವಾಗ್ದಾಳಿಯನ್ನು ನಡೆಸಿರುವುದಲ್ಲದೇ ಅಸಾದುದ್ದೀನ್ ಒವೈಸಿ ಪಾರ್ಟಿಯ ಸಹಕಾರ ಪಡೆದು ಉಗ್ರರಿಗೆ ಬೆಂಬಲವನ್ನು ನೀಡಿದೆ ಎಂದು ಅವರು ಆರೋಪಿಸಿದ್ದರು. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ತಮ್ಮ ಪಕ್ಷದಲ್ಲಿಯೇ ಉಗ್ರರಿದ್ದಾರೆ ಎಂದು ತಿರುಗೇಟು ನೀಡಿದ್ದರಲ್ಲದೇ, ದೇವೇಗೌಡರನ್ನು ವೃದ್ಧಾಶ್ರಮಕ್ಕೆ ಕಳುಹಿಸುತ್ತೇನೆ ಎಂದು ಮೋದಿ ಈ ಹಿಂದೆ ಹೇಳಿದ್ದ ಮಾತನ್ನು ಅವರು ನೆನಪಿಸಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮಾತ್ರ ಸ್ಪರ್ಧೆ ಇದೆ ಎಂದು ಬಿಂಬಿಸಲಾಗುತ್ತಿತ್ತು. ಆದರೆ ಬಿಎಸ್ಪಿ ಮತ್ತು ಜೆಡಿಎಸ್ ಮೈತ್ರಿಯಾಗುತ್ತಿದ್ದಂತೆಯೇ ಕರ್ನಾಟಕ ವಿಧಾನಸಭಾ ಚುನಾವಣಾ ಕಣ ಸಂಪೂರ್ಣವಾಗಿ ಬದಲಾಗಿತ್ತು. ಇಲ್ಲಿ ಬಿಜೆಪಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವ ಸ್ಥಿತಿಗೆ ತಲುಪಿತ್ತು. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ನೇರ ಸ್ಪರ್ಧೆ ಆರಂಭವಾಗಿತ್ತು. ಹೀಗಾಗಿಯೇ ಜೆಡಿಎಸ್ ಪ್ರಭಾವಶಾಲಿಯಾಗುತ್ತಿದ್ದಂತೆ, ಕಾಂಗ್ರೆಸ್ ಮತ್ತು ಬಿಜೆಪಿ ತೊರೆದು ಜೆಡಿಎಸ್ ಗೆ ದೊಡ್ಡ ದೊಡ್ಡ ನಾಯಕರು ಸೇರ್ಪಡೆಯಾಗಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]