Sunday, May 9 , 2021
ಕೊರೋನಾ 2ನೇ ಅಲೆ ಭೀತಿ: ಹಾಸ್ಟಲ್  ವಿದ್ಯಾರ್ಥಿಗಳನ್ನು ಖಾಲಿ ಮಾಡಿಸದಂತೆ ಸರ್ಕಾರಕ್ಕೆ ಮನವಿ

ಬೆಂಗಳೂರು (20-042021): ರಾಜ್ಯದಲ್ಲಿ ಕೊರೋನಾ ವೈರಸ್ ನ ಎರಡನೇ ಅಲೆ ಕಾಣಿಸಿಕೊಂಡಿದ್ದು ದಿನನಿತ್ಯ ವೈರಸ್ ಬಾಧಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಇದರಿಂದಾಗಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಆನ್ ಲೈನ್ ತರಗತಿಗಳು ನಡೆಯುತ್ತಿವೆ. ಹಾಸ್ಟಲ್ ಗಳನ್ನು ಮುಚ್ಚಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗುವ ಕಾರಣದಿಂದಾಗಿ ಹಾಸ್ಟಲ್ ಗಳನ್ನು ಮುಚ್ಚಬಾರದೆಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ವಿದ್ಯಾರ್ಥಿಗಳನ್ನು ಹಾಸ್ಟಲ್ ನಿಂದ ತೆರವುಗೊಳಿಸಿದರೆ ಅವರ ವಿದ್ಯಾಭ್ಯಾಸ ದ ಮೇಲೆ ಪರಿಣಾಮ ಬೀರುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಮಸ್ಯೆ ಮತ್ತು ಅಂತರ್ಜಾಲದ ಸಮಸ್ಯೆಯಿಂದಾಗಿ  ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಆದ ಕಾರಣ ಹಾಸ್ಟೆಲ್ ಗಳಲ್ಲಿ ವಿದ್ಯಾರ್ಥಿಗಳು ಉಳಿದುಕೊಳ್ಳಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಬೇಕೆಂದು ಪ್ರಜಾಸತ್ತಾತ್ಮಕ ದಲಿತ ವಿದ್ಯಾರ್ಥಿ ಒಕ್ಕೂಟದ ಪದಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಿದರು.

ಕಳೆದ ವರ್ಷದಲ್ಲಿ ಇದೇ ರೀತಿಯ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಸಾಕಷ್ಟು ತೊಂದರೆಗೆ ಸಿಲುಕಿದ್ದರು. ಕೆಲವು ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳು ಸಹ ಹಾಸ್ಟೆಲ್ ನಿಂದ ಕಳುವಾಗಿವೆ. ಮತ್ತೆ ಕೆಲವು ವಿದ್ಯಾರ್ಥಿಗಳು ಆನ್‌ಲೈನ್ ತರಗತಿಗಳಲ್ಲಿ ಸರಿಯಾಗಿ ಭಾಗವಹಿಸಲು ಸಾಧ್ಯವಾಗಿಲ್ಲ. ಆದ ಕಾರಣ ವಿದ್ಯಾರ್ಥಿನಿಲಯಗಳಿಂದ ಮಕ್ಕಳನ್ನು ಮನೆಗೆ ಕಳುಹಿಸದೆ  ಅಲ್ಲಿಗೆ ಅವರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಲಾಯಿತು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]