Friday, August 7 , 2020
ಕೋವಿಡ್ ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ- ಧರಧರನೆ ಮೃತದೇಹ ಎಳೆದಾಡುತ್ತಿದ್ದವರಿಗೆ ಮಾನವೀಯತೆಯ ಪಾಠ ಮಾಡಿದ ಪಿಎಫ್ಐ

ಚಾಮರಾಜನಗರ (12-07-2020): ಕೊಳ್ಳೇಗಾಲದಲ್ಲಿ ಕೋವಿಡ್  ವೈರಸ್​ಗೆ ಬಲಿಯಾದ ವ್ಯಕ್ತಿಯ ಅಂತ್ಯ ಸಂಸ್ಕಾರವನ್ನು ಗೌರವಯುತವಾಗಿ ಫಿಎಫ್ ಐ ಕಾರ್ಯಕರ್ತರು ನೆರವೇರಿಸಿದ್ದು ಜಿಲ್ಲಾಡಳಿತದ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಆರೋಗ್ಯ ಇಲಾಖೆ, ನಗರಸಭೆ ಸಿಬ್ಬಂದಿ ಜೊತೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಸ್ವಯಂಸೇವಕರು ಅಂತ್ಯಕ್ರಿಯೆಗೆ ಸಾಥ್ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಕಾಮಗೆರೆಯ 58 ವರ್ಷದ ವ್ಯಕ್ತಿಯೊಬ್ಬರು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇದಕ್ಕೂ ಮೊದಲು ಇವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಕಳುಹಿಸಲಾಗಿತ್ತು. ಆದರೆ ವರದಿ ಬರುವ ಮುನ್ನವೇ ಸಾವನ್ನಪ್ಪಿದ್ದರು. ಬಳಿಕ ಕೋವಿಡ್​-19 ರಿಪೋರ್ಟ್​ನಲ್ಲಿ ಸೋಂಕು ಇರುವುದು ದೃಢಪಟ್ಟಿತ್ತು. ಮೃತವ್ಯಕ್ತಿಯ ಶವವನ್ನು ಚಾಮರಾಜನಗರಕ್ಕೆ ಶನಿವಾರ ರಾತ್ರಿ ಆಯಂಬುಲೆನ್ಸ್ ಮೂಲಕ ತಂದು ಸರ್ಕಾರಿ ಮಾರ್ಗಸೂಚಿಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಅಂತ್ಯಕ್ರಿಯೆಯನ್ನು ಆರೋಗ್ಯ ಇಲಾಖೆಯಿಂದ ತರಬೇತಿ ಪಡೆದ ಪಿಎಫ್ ಐ ಸಿಬ್ಬಂದಿಗಳು ನೆರವೇರಿಸಿದ್ದು, ಸಕಲ ಗೌರವದೊಂದಿಗೆ ಧರ್ಮನೋಡದೆ, ತಮ್ಮ ಜೀವದ ಹಂಗನ್ನು ತೊರೆದು ವಿಧಿ ವಿಧಾನವನ್ನು ನೆರವೇರಿಸಿದ್ದಾರೆ.

ದೇಶದಾದ್ಯಂತ ಪಿಎಫ್ ಐ ಕಾರ್ಯಕರ್ತರು, ಕೊರೊನಾದಿಂದ ಮೃತಪಟ್ಟವರ ಗೌರವಯುತ ಅಂತ್ಯ ಸಂಸ್ಕಾರವನ್ನು ಮಾಡುತ್ತಿದ್ದಾರೆ. ಅಮಾನವೀಯವಾಗಿ ಧರಧರನೆ ಮೃತದೇಹವನ್ನು ಎಳೆದು ಕಾಟಾಚಾರಕ್ಕೆ ಮಣ್ಣು ಮಾಡುವ ಕಲ್ಲು ಹೃದಯಗಳಿಗೆ ಮಾದರಿಯಾಗಿದ್ದಾರೆ.

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]