Friday, April 16 , 2021
ಕ್ರಿಕೆಟ್: ದಾಖಲೆ ಮೇಲೆ ದಾಖಲೆ ಮಾಡುತ್ತಿರುವ ಯುವ ಆಟಗಾರರು

ಪುಣೆ (24-03-2021): ಭಾರತೀಯ ಕ್ರಿಕೆಟ್ ತಂಡದ ಯುವ ಆಟಗಾರರು ದಾಖಲೆ ಮೇಲೆ ದಾಖಲೆ ಮಾಡುತ್ತಿದ್ದಾರೆ. ಭಾರತದಲ್ಲಿ ಆರೋಗ್ಯಕರವಾದ ಸ್ಪರ್ಧೆ ನಡೆಯುತ್ತಿದೆ.

ನೆನ್ನೆ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತವು 66 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಪಾದಾರ್ಪಣೆ ಮಾಡಿದ ಕರ್ನಾಟಕದ ಪ್ರಸಿದ್ಧ ಕೃಷ್ಣ ಮತ್ತು ಮಹಾರಾಷ್ಟ್ರದ ಕೃಣಾಲ್ ಪಾಂಡ್ಯ ಅವರು ದಾಖಲೆಯ ಆಟವಾಡಿ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ.

ಮದ್ಯಮ ವೇಗದ ಬೌಲರ್ ಆದ ಪ್ರಸಿದ್ಧ ಕೃಷ್ಣ ತನ್ನ ಚೊಚ್ಚಲ ಪಂದ್ಯದಲ್ಲೇ 54 ರನ್‌ಗಳನ್ನು ನೀಡಿ ಪ್ರಮುಖ 4 ವಿಕೆಟ್‌ಗಳನ್ನು ಪಡೆದಿದ್ದಾರೆ. ತನ್ನ ಚೊಚ್ಚಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಆಗಿ ದಾಖಲೆ ಪುಟ ಸೇರಿದ್ದಾರೆ. ಕಪಿಲ್ ದೇವ್ ಅವರನ್ನು ಒಳಗೊಂಡಂತೆ 9 ಜನ ಬೌಲರ್‌ಗಳು ತಮ್ಮ ಪಾದಾರ್ಪಣೆ ಪಂದ್ಯದಲ್ಲಿ ಮೂರು ವಿಕೆಟ್ ಪಡೆದಿದ್ದಾರೆ.

ಮೊತ್ತೊಬ್ಬ ಆಟಗಾರ ಕೃಣಾಲ್ ಪಾಂಡ್ಯ ಚೊಚ್ಚಲ ಪಂದ್ಯದಲ್ಲಿ ಎರಡು ದಾಖಲೆಗಳನ್ನು ಮಾಡಿದ್ದಾರೆ. ಚೊಚ್ಚಲ ಪಂದ್ಯವಾಡಿದ ಆಟಗಾರರ ಪೈಕಿ ಅತಿ ವೇಗವಾಗಿ ಅರ್ಧ ಶತಕ ಗಳಿಸಿದ ಆಟಗಾರನಾಗಿದ್ದಾನೆ. ಕೇವಲ 31 ಎಸೆತಗಳಲ್ಲಿ 58 ರನ್‌ಗಳನ್ನು ಗಳಿಸಿದ್ದಾರೆ. ಮತ್ತೊಂದು ದಾಖಲೆ ಎಂದರೆ ತನ್ನ ಮೊದಲ ಏಕದಿನ ಪಂದ್ಯದಲ್ಲಿ ಅತಿ ಹೆಚ್ಚು ಸ್ಟ್ರೈಕ್ ರೇಟ್ ಹೊಂದಿದ ಆಟಗಾರನಾಗಿ ಹೊರ ಹೊಮ್ಮಿದ್ದಾರೆ. 1990 ರಲ್ಲಿ ಇಂಗ್ಲೆಂಡ್ ನ ಜಾನ್ ಮೊರಿಸ್ ತನ್ನ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ 140.00 ಸ್ಟ್ರೈಕ್ ರೈಟ್ ನಲ್ಲಿ ರನ್ ಗಳಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಆದರೆ ಕೃಣಾಲ್ ಪಾಂಡ್ಯ 187.10 ಸ್ಟ್ರೈಕ್ ರೇಟ್ ನಲ್ಲಿ ರನ್ ಗಳಿಸಿರುವುದು ಹೊಸ ವಿಶ್ವದಾಖಲೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಭಾರತದ ಯುವ ಪ್ರತಿಭೆಗಳು ತಮಗೆ ದೊರೆತ ಅವಕಾಶಗಳಲ್ಲಿ ದಾಖಲೆಯ ಆಟವಾಡುತ್ತಿರುವುದನ್ನು ಕಾಣಬಹುದು. ಕಳೆದ ಆಸ್ಟ್ರೇಲಿಯಾ ಸರಣಿಯಲ್ಲಿ ಟಿ.ನಟರಾಜನ್, ವಾಷಿಂಗ್‌ಟನ್ ಸುಂದರ್, ಶಾರ್ದುಲ್ ಠಾಕೋರ್ ಮತ್ತು ಶುಭ್ಮನ್ ಗಿಲ್ ತಮ್ಮ ಮಿಂಚಿದ್ದರು. ಇಂಗ್ಲೆಂಡ್ ಸರಣಿಯಲ್ಲಿ ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಕೃಣಾಲ್ ಪಾಂಡ್ಯ ಹಾಗೂ ಪ್ರಸಿದ್ಧ್ ಕೃಷ್ಣ ದಾಖಲೆಯಾಟವಾಡಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]