Sunday, May 9 , 2021
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ದಾಖಲೆಯ ಗೆಲುವು ದಾಖಲಿಸಿದ ಮುಂಬೈ ಇಂಡಿಯನ್ಸ್

ಸ್ಪೋರ್ಟ್ಸ್ ಡೆಸ್ಕ್ (02-05-2021):  ನೆನ್ನೆ ದೆಹಲಿಯ ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ನಡೆದ ಐಪಿಎಲ್ ನ 27 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ದ ದಾಖಲೆಯ ಚೇಸಿಂಗ್ ಜೊತೆಗೆ ನಾಲ್ಕು ವಿಕೆಟ್ ಗಳ ಅರ್ಹ ಗೆಲುವು ದಾಖಲಿಸಿದೆ.

ಟಾಸ್ ಸೋತು ಬ್ಯಾಟಿಂಗ್ ಮಾಡಿದ ಚೆನ್ನೈ ಪರ ಫಾಫ್ ಡು ಪ್ಲೆಸಿಸ್ (28 ಕ್ಕೆ 50), ಮೊಯಿನ್ ಆಲಿ  (36 ಕ್ಕೆ 58) ಅರ್ಧ ಶತಕ ಹಾಗೂ ಅಂಬಟಿ ರಾಯುಡು  (27 ಕ್ಕೆ 72) ಅಜೇಯ ಸಿಡಿಲಬ್ಬರದ ಬ್ಯಾಟಿಂಗ್ ನಿಂದ 4 ವಿಕೆಟ್ ನಷ್ಟಕ್ಕೆ 218 ರನ್ನುಗಳನ್ನು ಕಲೆ ಹಾಕಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಅತಿ ಕಠಿಣ ಗುರಿಯನ್ನೇ ನೀಡಿತ್ತು.

ಆರಂಭದಿಂದಲೂ ಬಿರುಸಿನ ಆಟಕ್ಕೆ ಮುಂದಾದ ಮುಂಬೈ ಇಂಡಿಯನ್ಸ್ ಆಟಗಾರರು ರನ್ ವೇಗ ಹೆಚ್ಚಿಸಿದಂತೆಲ್ಲಾ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದರು. ಗೆಲುವು ಚೆನ್ನೈ ಪರ ವಾಲುತ್ತಿದ್ದಾಗಲೇ ಫೀಲ್ಡಿಗಿಳಿದ ಕೀರನ್ ಪೊಲಾರ್ಡ್ ಸಿಕ್ಸರ್ ಬೌಂಡರಿ ಮೂಲಕ ಚೆನ್ನೈ ಬೌಲರ್‌ಗಳ ಬೆವರಿಳಿಸಿದರು. ಅತಿ ವೇಗದ ಅರ್ಧಶತಕ ಬಾರಿಸಿ ಕೇವಲ 34 ಎಸೆತಗಳಲ್ಲಿ ಅಮೋಘ 87 ರನ್ ಸಿಡಿಸಿ ಅಜೇಯರಾಗುಳಿದು ತಂಡವನ್ನು ಗೆಲುವಿನ ಲಯಕ್ಕೆ ಮರಳುವಂತೆ ಮಾಡಿದರು.

ಕೊನೆಯ ಎಸೆತದವರೆಗೂ ಕುತೂಹಲ ಕೆರಳಿಸಿದ್ದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಅತ್ಯಧಿಕ ರನ್ ಚೇಸ್ ಮೂಲಕ 6 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿ 4 ವಿಕೆಟ್ ಗಳ ದಾಖಲೆಯ ಗೆಲುವು ದಾಖಲಿಸಿತು. ಭರ್ಜರಿ ಬ್ಯಾಟಿಂಗ್ ಜೊತೆಗೆ 2 ಓವರ್ ಬೌಲ್ ಮಾಡಿ 12 ರನ್ ನೀಡಿ, 2 ವಿಕೆಟ್ ಕೂಡ ಕಬಳಿಸಿ ಬೌಲಿಂಗ್‌ನಲ್ಲಿಯೂ ಮಿಂಚಿದ ಕೀರನ್ ಪೊಲಾರ್ಡ್ ಆಲ್ ರೌಂಡರ್ ಆಟಕ್ಕೆ ಪಂದ್ಯ ಪುರುಷೋತ್ತಮ ಪ್ರಶಸ್ತಿಯನ್ನು ಪಡೆದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]