Friday, April 16 , 2021
Breaking News | ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಆತ್ಮಹತ್ಯೆ ಯತ್ನ!?

ಕೋಲಾರ (08-04-2021): ಬಿಗ್ ಬಾಸ್ ಖ್ಯಾತಿಯ ನಟಿ ಚೈತ್ರಾ ಕೋಟೂರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೋಲಾರ ನಗರದ ತಮ್ಮ ಮನೆಯಲ್ಲಿ ಸಾವಿಗೆ ಶರಣಾಗುವ ವಿಫಲ ಪ್ರಯತ್ನ ಮಾಡಿದ್ದಾರೆ.

ಇದೇ ಮಾರ್ಚ್ 28 ರಂದು ಮಂಡ್ಯ ಮೂಲದ ನಾಗಾರ್ಜುನ್ ಎಂಬುವವರನ್ನು ವಿವಾಹವಾಗಿದ್ದರು. ಇದು ವರನ ಪೋಷಕರಿಗೆ ಇಷ್ಟವಿರಲಿಲ್ಲ. ಆದರೆ ಸಂಘಟನೆಗಳ ನೆರವಿನಿಂದ ವಿವಾಹವಾಗಿದ್ದರಾದರೂ ಮಾರನೇ ದಿನವೇ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಸಂಬಂಧ ಮುರಿದು ಬೀಳುವ ಹಂತ ತಲುಪಿತ್ತು. ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಸಾಧ್ಯತೆ ಇದೆ.

ಕಳೆದ ಬಾರಿಯ ಬಿಗ್ ಬಾಸ್ ಆವೃತ್ತಿಯ ಸ್ಪರ್ಧಿಯಾಗಿದ್ದ ಚೈತ್ರಾ ಕೋಟೂರು ‘ಅಸ್ಪೃಶ್ಯ’ ಎಂಬ ಪದ ಬಳಸಿ ವಿವಾದಕ್ಕೀಡಾಗಿದ್ದರು. ಈಗ ಆತ್ಮಹತ್ಯೆಗೆ ಯತ್ನಿಸಿರುವ ಇವರನ್ನು ಕೋಲಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]