
ಹಾಸನ (16-02-2021): ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಪರಿವರ್ತನ ಸಂಘದ (BPS) ಕಾರ್ಯಕರ್ತರು ಜಿಲ್ಲಾಕೇಂದ್ರಗಳಲ್ಲಿ ಭಾರಿ ಪ್ರತಿಭಟನೆ ನಡೆಸಿದರು.
ಹಾಸನ: ಭಾರತೀಯ ಪರಿವರ್ತನ ಸಂಘದ ಜಿಲ್ಲಾಧ್ಯಕ್ಷ ಸ್ಟೀವನ್ ಪ್ರಕಾಶ್, ಉಸ್ತುವಾರಿ ಯೋಗೇಶ್ ನೇತೃತ್ವದಲ್ಲಿ ಪ್ರತಿಭಟನಾಕಾರರು ಒಂದೆಡೆ ಸೇರಿ ಜಿಲ್ಲಾಧಿಕಾರಿ ಕಛೇರಿವರೆಗೆ ಜಾಥಾ ನಡೆಸಿದರು. ಪಿಟಿಸಿಎಲ್ ಕಾಯ್ದೆ ತಿದ್ದುಪಡಿ, ಗೋಹತ್ಯೆ ನಿಷೇಧ ಕಾನೂನು ರದ್ದು ಮಾಡುವಂತೆ ಸರ್ಕಾರವನ್ನು ಆಗ್ರಹಪಡಿಸಿದರು. ಹಾಗೂ ರೈತರ ಮೇಲಿನ ನಡೆಯುತ್ತಿರುವ ದೌರ್ಜನ್ಯವನ್ನು ಖಂಡಿಸಿದ ಪ್ರತಿಭಟನಾಕಾರರು ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದರು. ತೈಲ ಬೆಲೆ ಇಳಿಸುವಂತೆ, ಪಾಳುಬಿದ್ದಿರುವ ಸರ್ಕಾರಿ ಕೃಷಿ ಭೂಮಿಯನ್ನು ವಿದ್ಯಾವಂತ ನಿರುದ್ಯೋಗಿಗಳಿಗೆ ಹಂಚಿಕೆ ಮಾಡಬೇಕೆಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ BPS ಹಾಸನ ಜಿಲ್ಲಾ ಉಪಾಧ್ಯಕ್ಷ ಮೋಹನ್ ಕಾಡ್ಲೂರು, ಪ್ರಧಾನ ಕಾರ್ಯದರ್ಶಿ ವಿನೋದ್ ರಾಜ್, ಜಿಲ್ಲಾ ಖಜಾಂಚಿ ರಾಮು ಮತ್ತು ವಿವಿಧ ತಾಲ್ಲೂಕಿನ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಚಿಕ್ಕಮಗಳೂರು: ಚಿಕ್ಕಮಗಳೂರು BPS ಜಿಲ್ಲಾಧ್ಯಕ್ಷ ಚಿದಂಬರ್ ನೇತೃತ್ವದಲ್ಲಿ ಇಂದು ಬಿಪಿಎಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಪಿಟಿಸಿಎಲ್ ಕಾಯಿದೆ ತಿದ್ದುಪಡಿ, ಗೋಹತ್ಯೆ ನಿಷೇಧ, ತೈಲಬೆಲೆ ಇಳಿಕೆ, ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ಭೂಮಿ ಹಂಚಿಕೆ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಂ.ಎನ್,ಲೋಕೇಶ್, ಕೆ.ಹೆಚ್,ನಾಗೇಶ್, ಸಂದೀಪ್, ವಿನೋದ್, ಸುಂದ್ರೇಶ್ , ಚೇತನ್ ಮುಂತಾದವರು ಹಾಜರಿದ್ದರು.
ತುಮಕೂರು: ಭಾರತೀಯ ಪರಿವರ್ತನ ಸಂಘ BPS ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆ ,ಗೋಹತ್ಯೆ ನಿಷೇಧ, ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಹಾಗೂ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಹಾಗೂ ಪಾಳುಬಿದ್ದಿರುವ 12 ಲಕ್ಷ ಎಕ್ಟರ್ ಸರ್ಕಾರಿ ಕೃಷಿ ಭೂಮಿಯನ್ನು ವಿದ್ಯಾವಂತ ನಿರುದ್ಯೋಗಿಗಳಿಗೆ ನೀಡಬೇಕು, PTCL 1978 ಕಾಯ್ದೆ ಮೊದಲಿನಂತೆಯೇ ಮುಂದುವರೆಯಲಿ ಎಂದು ಒತ್ತಾಯಿಸಿ ಇಂದು ತುಮಕೂರು ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಧರಣಿಯನ್ನು ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು.

ಪ್ರತಿಭಟನೆಯ ನೇತೃತ್ವವನ್ನು BPS ಜಿಲ್ಲಾಧ್ಯಕ್ಷ ಕೆಂಚರಾಯ ವಹಿಸಿದ್ದರು ಮತ್ತು ಈ ಸಂದರ್ಭದಲ್ಲಿ ವಿವಿಧ ತಾಲ್ಲೂಕುಗಳಿಂದ ಭಾರಿ ಸಂಖ್ಯೆಯಲ್ಲಿ ಕಾರ್ಯಕರ್ತರು ಆಗಮಿಸಿದ್ದರು.