Sunday, September 19 , 2021
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ: ಜನತೆಗೆ ಬಂಪರ್ ಕೊಡುಗೆ

ಚೆನ್ನೈ (07-05-2021): ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ (ದ್ರಾವಿಡ ಮುನ್ನೇತ್ರ ಕಳಗಂ) ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ನಿಮಿಷಗಳಲ್ಲಿ ರಾಜ್ಯದ ಜನತೆಗೆ ಬಂಪರ್ ಕೊಡುಗೆಯನ್ನು ಸಹ ಘೋಷಣೆ ಮಾಡಿದ್ದಾರೆ.

ತಮಿಳುನಾಡಿನ ಬಡ ಕುಟುಂಬಗಳಿಗೆ ಪ್ರತಿ ಕುಟುಂಬಕ್ಕೆ  ನಾಲ್ಕು ಸಾವಿರ ರೂಪಾಯಿಗಳನ್ನು ಪಾವತಿಸಲಾಗುವುದು ಎಂದು ಘೋಷಿಸಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿರುವ ಬಡ ಕುಟುಂಬಗಳಿಗೆ ನಾಲ್ಕು ಸಾವಿರ ಪಾವತಿಸಲಾಗುವುದು. ಪ್ರತಿ ಲೀಟರ್ ಹಾಲಿನ ಬೆಲೆಯಲ್ಲಿ ಮೂರು ರೂಪಾಯಿಗಳನ್ನು ಕಡಿತಗೊಳಿಸಲಾಗುವುದು ಹಾಗೂ ನಗರ ಸಾರಿಗೆಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಮಾಡಿಕೊಡಲಾಗುವುದು ಎಂದು ಸ್ಟಾಲಿನ್ ಘೋಷಿಸಿದ್ದಾರೆ.

ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಮಾತ್ರವಲ್ಲದೆ 33 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. 19 ಮಾಜಿ ಸಚಿವರು ಹಾಗೂ 14 ಹೊಸಬರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]