Friday, August 7 , 2020
ದ.ಕ.ಜಿಲ್ಲೆಯಲ್ಲಿ 1ವಾರ, ಧಾರವಾಡದಲ್ಲಿ 10ದಿನ ಲಾಕ್ ಡೌನ್-ಉಸ್ತುವಾರಿ ಸಚಿವರಿಂದ ಅಧೀಕೃತ ಘೋಷಣೆ

ಮಂಗಳೂರು(13-07-2020): ದ.ಕ.ಜಿಲ್ಲೆಯಲ್ಲಿ ಗುರುವಾರದಿಂದ 1 ವಾರಗಳ ಕಾಲ ಮತ್ತು ಧಾರವಾಡದಲ್ಲಿ 10ದಿನಗಳ ಕಾಲ ಲಾಕ್ ಡೌನ್ ಗೆ ಘೋಷಣೆ ಮಾಡಲಾಗಿದೆ.

ಇಂದು ಬೆಳಿಗ್ಗೆ ಸಿಎಂ ಮಾತನಾಡಿ ಜಿಲ್ಲಾವಾರು ಲಾಕ್ ಡೌನ್ ಬಗ್ಗೆ ಪರಿಸ್ಥಿತಿಯನ್ನು ನೋಡಿಕೊಂಡು ಜಿಲ್ಲಾಧಿಕಾರಿಗಳು ಕ್ರಮವನ್ನು ಕೈಗೊಳ್ಳಬೇಕು ಎಂದು ಹೇಳಿಕೆಯನ್ನು ನೀಡಿದ್ದರು.

ಈ ಬೆನ್ನಲ್ಲೇ ಮಂಗಳೂರಿನಲ್ಲಿ ಸಿಎಂ ಜೊತೆಗಿನ ವಿಡಿಯೋ ಕಾನ್ಪರೆನ್ಸ್ ಬಳಿಕ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜು.16ರ ಗುರುವಾರದಿಂದ 1ವಾರಗಳ ಕಾಲ ಲಾಕ್ ಡೌನ್ ಘೋಷಿಸಿದ್ದಾರೆ.

ಇಂದಿನಿಂದ ಬುಧವಾರದವರೆಗೆ ಎಲ್ಲಾ ವಾಣಿಜ್ಯ ವ್ಯವಹಾರಗಳು ತೆರೆದಿದ್ದು, ಸಾರ್ವಜನಿಕರು ಅಗತ್ಯ ಸಾಮಗ್ರಿಗಳು ಹಾಗೂ ಮೂಲಭೂತ ಅಗತ್ಯ ವಸ್ತುಗಳನ್ನು ಖರೀದಿಸಬೇಕು. ಬುಧವಾರ ರಾತ್ರಿಯಿಂದ ಒಂದು ವಾರ ನಡೆಯಲಿರುವ ಲಾಕ್‌ಡೌನ್ ಬಗ್ಗೆ ಜಿಲ್ಲಾಧಿಕಾರಿ ಮಾರ್ಗಸೂಚಿ ಹಾಗೂ ನಿಯಮಗಳನ್ನು ಪ್ರಕಟಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಧಾರವಾಡ ಜಿಲ್ಲೆಯಾದ್ಯಂತ ಜುಲೈ 15 ರ ಬೆಳಿಗ್ಗೆ 10 ಗಂಟೆಯಿಂದ, ಜುಲೈ 24ರ ರಾತ್ರಿ 8 ಗಂಟೆಯವರೆಗೆ ಲಾಕ್ ಡೌನ್ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಟಿಯಲ್ಲಿ ತಿಳಸಿದ್ದಾರೆ.

ನಿರ್ಮಾಣ ಕಾಮಗಾರಿ, ಕೈಗಾರಿಕೆ ಚಟುವಟಿಕೆಗಳು, ಜೀವನಾವಶ್ಯಕ ವಸ್ತುಗಳ ಪೂರೈಕೆಗೆ ವಿನಾಯಿತಿ ನೀಡಲಾಗುವುದು. ಲಾಕ್ ಡೌನ್ ಬಗ್ಗೆ ಅಧಿಕೃತವಾಗಿ ವಿವರ ಹೊರಡಿಸಲಾಗುವುದು ಎಂದು ಹೇಳಿದ್ದಾರೆ.

 

 

 

 

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]