
ಸಿನಿ ವಿಮರ್ಶೆ(16-01-2018): ಸಿನಿ ಪ್ರಿಯರಲ್ಲಿ ಭಾರೀ ನಿರೀಕ್ಷೆಯನ್ನು ಮೂಡಿಸಿರುವ ಹಂಬಲ್ ಪೊಲಿಟಿಷಿಯನ್ ನೊಗರಾಜ್ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಪಕ್ಕಾ ಕಾಮಿಡಿಯಾಗಿರುವ ಈ ಸಿನಿಮಾ ರಾಜಕೀಯ ವ್ಯವಸ್ಥೆಯ ಬಗ್ಗೆ ಇದೆ. ಹಾಗಂತ ಇಲ್ಲಿ ಉಪದೇಶ ಮಾಡಿಲ್ಲ.
ಹಂಬಲ್ ಪೊಲಿಟಿಷಿಯನ್ ನೊಗರಾಜ್ ರಾಜಕೀಯ ಹಿನ್ನೆಲೆಯಲ್ಲಿ ಸಾಗುವ ಕಥೆಯನ್ನು ಹೊಂದಿದೆ. ರಾಜಕೀಯ, ರಾಜಕಾರಣಿಗಳನ್ನು ವಿಡಂಬಣೆ ಮಾಡುತ್ತಾ ಸಾಗುವ ಈ ಸಿನಿಮಾದಲ್ಲಿ ನಿಮಗೆ ಮನರಂಜನೆಗೇನೂ ಕೊರತೆಯಿಲ್ಲ. ಇಡೀ ಸಿನಿಮಾವನ್ನು ಕಾಮಿಡಿ ಹಿನ್ನೆಲೆಯಲ್ಲಿ ಕಟ್ಟಿಕೊಡುವ ಮೂಲಕ ಸಿಕ್ಕಾಪಟ್ಟೆ ಸೀರಿಯಸ್ ಸಿನಿಮಾ ಎಂಬ ಮಾತಿನಿಂದ ನೊಗರಾಜ್ ನನ್ನುಮುಕ್ತವಾಗಿಸಿದ್ದಾರೆ. ಈಗಾಗಲೇ ರಾಜಕೀಯ, ಭ್ರಷ್ಟ ರಾಜಕಾರಣಿಗಳನ್ನು ವಿಡಂಬಣೆ ಮಾಡುವ ಚಿತ್ರಗಳು ಕನ್ನಡದಲ್ಲಿ ಬಂದಿವೆ. ಆದರೆ, ‘ನೊಗ್ ರಾಜ್’ನ ಕಥೆಯಲ್ಲಿ ರಾಜಕೀಯ ವಿಡಂಬಣೆ ಇದ್ದರೂ ನಿರ್ದೇಶಕರು ಅದನ್ನು ತಮ್ಮದೇ ಶೈಲಿಯಲ್ಲಿ ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ. ಆ ಮಟ್ಟಿಗೆ ಇದು ಹೊಸ ಪ್ರಯತ್ನ ಎನ್ನಬಹುದು.
ಇನ್ನು ಚಿತ್ರದಲ್ಲಿ ಒಂದಷ್ಟು ದೃಶ್ಯಗಳಿಗೆ ಕತ್ತರಿ, ಹಾಕಿ ಟ್ರಿಮ್ ಮಾಡುವ ಅವಕಾಶ ನಿರ್ದೇಶಕರಿಗಿತ್ತು. ಚಿತ್ರದ ಸಂಭಾಷಣೆ ಚುರುಕಾಗಿದೆ. ನೊಗ್ ರಾಜ್ ಮ್ಯಾನರಿಸಂಗೆ ಆ ಸಂಭಾಷಣೆ ಹೊಂದಿಕೊಂಡಿದೆ. ನೊಗ್ ರಾಜ್ ಪಾತ್ರವನ್ನು ಅವರು ಅಕ್ಷರಶಃ ಜೀವಿಸಿದ್ದಾರೆ. ಅವರ ಮಾತಿನ ಶೈಲಿ, ಮ್ಯಾನರಿಸಂ ಎಲ್ಲವೂ ಪಾತ್ರಕ್ಕೆ ಹೊಂದಿಕೊಂಡಿದೆ.”