Saturday, April 17 , 2021
ಪವರ್ ಸ್ಟಾರ್ ಪುನೀತ್ ರಿಂದ ಸ್ಪೂರ್ತಿ ಪಡೆದ ಟೀಮ್ ಇಂಡಿಯಾದ  ಕೂಲ್ ಕ್ಯಾಪ್ಟನ್ ದೋನಿ

ಬೆಂಗಳೂರು (08-04-2021): ಭಾರತದ ಖ್ಯಾತ ಕ್ರಿಕೆಟ್ ತಾರೆ ಮಹೇಂದ್ರ ಸಿಂಗ್ ಧೋನಿ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಮಾಡಿದ ಒಂದು ಉತ್ತಮ ಕೆಲಸದಿಂದ ಸ್ಪೂರ್ತಿ ಪಡೆದಿದ್ದಾರೆ.

ಜಗತ್ತನ್ನೇ ಬೆಚ್ಚಿ ಬೀಳಿಸುತ್ತಿರುವ ಕೊರೋನಾ ವೈರಸ್ ನಿಂದಾಗಿ ಬಹುತೇಕ ರಾಷ್ಟ್ರಗಳು ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಮಾಡಿವೆ.ಇದರಿಂದ ಜನ ಜೀವಜೀವನವೇ ಸ್ತಬ್ಧವಾಯಿತು. ಈ ಪರಿಸ್ಥಿತಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ನೀಡಿದ್ದರು. ಆರೋಗ್ಯವನ್ನು ಕಾಪಾಡಿಕೊಳ್ಳಲು ಹಾಗೂ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಶಾರೀರಿಕವಾಗಿ ಫಿಟ್ ಆಗಿರಬೇಕು, ಆದ್ದರಿಂದ ಎಲ್ಲರೂ ವರ್ಕ್ ಔಟ್ ಮಾಡಬೇಕು ಎಂಬ ಸಂದೇಶವನ್ನು ನೀಡಿದ್ದರು. ಜೊತೆಗೆ ಅವರು ವರ್ಕ್ ಔಟ್ ಮಾಡುತ್ತಿರುವ ಕೆಲವು ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಪುನೀತ್ ರಾಜ್‍ಕುಮಾರ್ ಅವರ ವರ್ಕ್ ಔಟ್ ಮಾಡುವ ವಿಡಿಯೋ ನೋಡಿ ಪ್ರೇರಣೆ ಪಡೆದ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಪುನೀತ್ ರಾಜ್‍ಕುಮಾರ್ ಗೆ ಕರೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಯುವರತ್ನ ಸಿನಿಮಾದ ನಿರ್ದೇಶಕರಾದ ಆನಂದ್ ರಾಮ್ ಸಂದರ್ಶನವೊಂದರಲ್ಲಿ ಈ ವಿಷಯವನ್ನು ಬಹಿರಂಗ ಪಡಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]