
ತಿರುವನಂತಪುರಂ: ಇನ್ನೇನು ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೇರಳ ಬಿಜೆಪಿ ಸಂಕಷ್ಟಕ್ಕೆ ಸಿಲುಕಿದೆ. ಅಲ್ಲಿಯ ಬಿಜೆಪಿ ಅಭ್ಯರ್ಥಿ ಪ್ರಕಾಶ್ ಬಾಬು ಜೈಲು ಸೇರಿದ್ದಾರೆ.
ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶಿಸಲೆತ್ನಿಸಿದ ಮಹಿಳಾ ಭಕ್ತರೋರ್ವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕಾಶ್ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕಾಶ್ ಬಾಬು ಬಿಜೆಪಿಯ ಕೋಯಿಕ್ಕೋಡು ಕ್ಷೇತ್ರ ಲೋಕಸಭಾ ಅಭ್ಯರ್ಥಿಯಾಗಿದ್ದಾರೆ. ನಿನ್ನೆ ಗುರುವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕಾಶ್ ಬಾಬುಗೆ 15ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶಿಸಬಹುದು ಎಂದು ಕಳೆದ ವರ್ಷದ ಸೆಪ್ಟಂಬರ್ 28 ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಇದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ದೇವಸ್ಥಾನಕ್ಕೆ ಅಗಮಿಸಿದ್ದ ಮಹಿಳಾ ಭಕ್ತರೋರ್ವರ ಮೇಲೆ ಪ್ರಕಾಶ್ ಬಾಬು ಸೇರಿದಂತೆ ಗುಂಪೊಂದು ಹಲ್ಲೆ ನಡೆಸಿತ್ತು.