Sunday, May 9 , 2021
ಬೆಂಗಳೂರು ವಿಶ್ವವಿದ್ಯಾಲಯ ಲಾಕ್ ಡೌನ್!

ಬೆಂಗಳೂರು (18-04-2021): ಕೊರೋನಾ ವೈರಸ್ ನ ಎರಡನೇ ಅಲೆಯು ದೇಶದಾದ್ಯಂತ ವೇಗವಾಗಿ ಹರಡುತ್ತಿದೆ. ಈ ಸಂಕಷ್ಟ ಸ್ಥಿತಿಯಲ್ಲಿ ಲಾಕ್ ಡೌನ್ ಮಾಡಬೇಕೆ, ಬೇಡವೇ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯೋಚಿಸುತ್ತಿರುವ ಸಂದರ್ಭದಲ್ಲಿ ಬೆಂಗಳೂರು ವಿಶ್ವವಿದ್ಯಾಲಯವು ಲಾಕ್ ಡೌನ್ ಘೋಷಣೆ ಮಾಡಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿವಿ ಕುಲಸಚಿವರು ಆದೇಶ ಹೊರಡಿಸಿದ್ದು ವೈರಸ್ ತುಂಬಾ ವೇಗವಾಗಿ ಹರಡುತ್ತಿದೆ ಮತ್ತು ಅಪಾಯಕಾರಿಯಾಗಿದೆ. ಆದ್ದರಿಂದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಇದೇ ತಿಂಗಳ 19 ರಿಂದ ಬೆಂಗಳೂರು ವಿವಿ ವ್ಯಾಪ್ತಿಯಲ್ಲಿ ಬರುವ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿ ನಿಲಯಗಳನ್ನು ಒಳಗೊಂಡಂತೆ ಎಲ್ಲಾ ಹಾಸ್ಟಲ್ ಗಳನ್ನು ಮುಚ್ಚಲಾಗುವುದು.  ವಿದ್ಯಾರ್ಥಿಗಳು ತಮ್ಮ ತಮ್ಮ ಊರುಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ವಿವಿಯ ವಿದ್ಯಾರ್ಥಿಗಳಿಗೆ ಕಳೆದ ವಾರದಲ್ಲಿ ಶಿಕ್ಷಣ ಇಲಾಖೆಯು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಉಳಿದೆಲ್ಲಾ ವಿದ್ಯಾರ್ಥಿಗಳಿಗೆ ಕೇವಲ ಆನ್ ಲೈನ್ ಪಾಠಗಳನ್ನು ಮಾತ್ರ ಮಾಡಲಾಗುತ್ತಿತ್ತು. ಪ್ರಸ್ತುತ ಎಲ್ಲಾ ಹಾಸ್ಟಲ್ ಗಳನ್ನು ಮುಚ್ಚಲು ತೀರ್ಮಾನಿಸಿರುವ ವಿವಿಯು ಕೊರೋನಾ ನಿಯಂತ್ರಣದ ನಂತರ ಹಾಸ್ಟಲ್ ಪ್ರಾರಂಭಿಸುವ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]