Sunday, September 19 , 2021
ಭಾರತದಲ್ಲಿ 100ಬಿಲಿಯನ್ ಹೂಡಿಕೆಗೆ ಮುಂದಾದ ಸೌದಿ ಸರಕಾರ

ನವದೆಹಲಿ(29-09-2019): ಭಾರತದ ವಿವಿಧ ರಾಜ್ಯಗಳ ವಿವಿಧ ವಲಯಗಳಲ್ಲಿ 100ಬಿಲಿಯನ್ ದೀರ್ಘಕಾಲೀನ ಹೂಡಿಕೆಗೆ ವಿಶ್ವದಲ್ಲೇ ಅತಿಹೆಚ್ಚು ತೈಲ ರಪ್ತು ಹೊಂದಿರುವ ಸೌದಿ ಸರಕಾರ ಮುಂದಾಗಿದೆ.

ಸೌದಿ ರಾಯಭಾರಿ ಡಾ. ಸೌದ್ ಬಿನ್ ಮೊಹಮ್ಮದ್ ಅಲ್ ಸತಿ ಮಾತನಾಡಿ, ಭಾರತವು ಸೌದಿ ಅರೇಬಿಯಾಕ್ಕೆ ಆಕರ್ಷಕ ಹೂಡಿಕೆಯ ತಾಣವಾಗಿದೆ. ತೈಲ, ಅನಿಲ ಮತ್ತು ಗಣಿಗಾರಿಕೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ನವದೆಹಲಿಯೊಂದಿಗೆ ದೀರ್ಘಕಾಲೀನ ಸಹಭಾಗಿತ್ವವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಇಂಧನ, ಸಂಸ್ಕರಣೆ, ಪೆಟ್ರೋಕೆಮಿಕಲ್ಸ್, ಮೂಲಸೌಕರ್ಯ, ಕೃಷಿ, ಖನಿಜಗಳು ಮತ್ತು ಗಣಿಗಾರಿಕೆ ಕ್ಷೇತ್ರಗಳಲ್ಲಿ ಭಾರತದಲ್ಲಿ 100ಬಿಲಿಯನ್ ಮೌಲ್ಯದ ಹೂಡಿಕೆ ಮಾಡಲು ಸೌದಿ ಅರೇಬಿಯಾ ಇಚ್ಚಿಸಿದೆ ಎಂದು ಅಲ್ ಸತಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಸೌದಿ ಅರೇಬಿಯಾದ ಅತಿದೊಡ್ಡ ತೈಲ ದೈತ್ಯ ಅರಾಮ್ಕೊ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಜೊತೆಗಿನ ಸಹಭಾಗಿತ್ವ ಎರಡು ದೇಶಗಳ ಇಂಧನ  ಸಂಬಂಧಗಳ ಬೆಳವಣಿಗೆಯ ಸ್ವರೂಪವನ್ನು ತಿಳಿಸುತ್ತದೆ ಎಂದು ಹೇಳಿದ್ದಾರೆ. ತೈಲ ಪೂರೈಕೆ, ಮಾರ್ಕೆಟಿಂಗ್, ಪೆಟ್ರೋಕೆಮಿಕಲ್ಸ್ ಮತ್ತು ಲೂಬ್ರಿಕಂಟ್‌ಗಳಿಗೆ ಸಂಸ್ಕರಣೆ ಮಾಡುವುದರಿಂದ ಭಾರತದ ಮೌಲ್ಯ ಸರಪಳಿಯಲ್ಲಿ ಹೂಡಿಕೆ ಮಾಡುವುದು ಅರಾಮ್ಕೋ ದ ಜಾಗತಿಕ ಡೌನ್‌ಸ್ಟ್ರೀಮ್ ಕಾರ್ಯತಂತ್ರದ ಪ್ರಮುಖ ಭಾಗವಾಗಿದೆ ಎಂದು ರಾಯಭಾರಿ ಹೇಳಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]