Saturday, September 19 , 2020
ಮುಂದವರಿದ ಮಳೆಯ ಅಬ್ಬರ:ಹಲವೆಡೆ ಪ್ರವಾಹದ ಭೀತಿ

ಬೆಂಗಳೂರು(05-08-2020): ಕರಾವಳಿ, ಮಲೆನಾಡು ಭಾಗಗಳಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಕೆಲವಡೆ ನೆರೆ ಭೀತಿ ಪ್ರಾರಂಭವಾಗಿದೆ.

ಪ್ರಮುಖ ನದಿ, ಕೆರೆಗಳು ಉಕ್ಕಿ ಹರಿಯುತ್ತಿದೆ. ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ ಕಂಡಿದೆ. ಜಲಾಶಯಗಳಲ್ಲಿ ಒಳಹರಿವು ಹೆಚ್ಚಾಗಿದೆ.

ಕಾವೇರಿ ನದಿ ತುಂಬಿ ಹರಿಯುತ್ತಿದೆ. ಕಾವೇರಿ ನೀರಾವರಿ ನಿಗಮ ಮತ್ತು ಮೈಸೂರು ಜಿಲ್ಲಾಡಳಿತ ಮಂಡಳಿಯು ತಗ್ಗು ಪ್ರದೇಶಗಳಲ್ಲಿರುವ ಜನರು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಕುಮಾರಧಾರಾ ನದಿ ಸಂಪೂರ್ಣವಾಗಿ ತುಂಬಿ ಹರಿದು ಕುಕ್ಕೆ ಸುಬ್ರಹ್ಮಣ್ಯ, ಸ್ನಾನಘಟ್ಟ ಮುಳುಗಿದೆ. ಮಂಗಳೂರು ಹೊರವಲಯದ ಕುಲಶೇಖರ-ಕಾವೂರು ರಸ್ತೆಯಲ್ಲಿ ಮರ ಬಿದ್ದು ವಾಹನ ಜಖಂಗೊಂಡಿದೆ. ಉಡುಪಿಯಲ್ಲಿ ಪ್ರಮುಖ ನದಿಗಳಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಮನೆಗಳಿಗೆ ನೀರು ನುಗ್ಗಿದೆ. ಸಮುದ್ರ ತೀರದಲ್ಲಿ ಗಾಳಿಯ ಅಬ್ಬರ ಜೋರಾಗಿದ್ದು, ಇನ್ನೆರಡು ದಿನಗಳ ಕಾಲ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]