Sunday, September 19 , 2021
ಮೋದಿ-ಮಾಧ್ಯಮಗಳಿಗೆ ಮುಜುಗರ ತಂದ ಅರವಿಂದ್ ಕೇಜ್ರಿವಾಲ್ ಪ್ರಶ್ನೆಗಳು

ಪುಲ್ವಾಮಾ ದಾಳಿಯ ಬಳಿಕ ನಡೆದ ಯುದ್ಧದ ಸನ್ನಿವೇಶಗಳ ಘಟನೆಗಳ ನಡುವೆ ಬಿಜೆಪಿ ತನ್ನ ರಾಜಕೀಯ ಕಾರ್ಯಕ್ರಮವನ್ನು ನಿರಂತರವಾಗಿ ಮುಂದುವರಿಸಿಕೊಂಡು ಹೋಗಿರುವುದು ಹಲವು ಶಂಕೆಗಳಿಗೆ ಕಾರಣವಾಗಿತ್ತು. ಬಿಜೆಪಿಯ ನಡೆಯನ್ನೂ ಎಲ್ಲೂ ಪ್ರಶ್ನಿಸದ ಮಾಧ್ಯಮಗಳು ಪ್ರಧಾನಿ ಮೋದಿಯನ್ನು ಪ್ರಶ್ನಿಸಿದವರನ್ನೇ ದೂಷಿಸುವ ಕೆಲಸಕ್ಕೆ ಮತ್ತೆ ಕೈಹಾಕಿದೆ.

2019-20ರ ಬಜೆಟ್ ಚರ್ಚೆಯ ವೇಳೆ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಬಿಜೆಪಿ ಹಾಗೂ ಪ್ರಧಾನಿ ಮೋದಿಯನ್ನು ಕೆಲವೊಂದು ಪ್ರಶ್ನೆಗಳನ್ನು ಕೇಳಿದ್ದು, ಈ ಪ್ರಶ್ನೆಗಳು ಬಿಜೆಪಿ ಪರ ಮಾಧ್ಯಮ ಹಾಗೂ ಬಿಜೆಪಿಗೆ ತೀವ್ರ ಮುಜುಗರವನ್ನುಂಟು ಮಾಡಿದೆ.

ಯಡಿಯೂರಪ್ಪ ಹೇಳಿಕೆಯ ಆಧಾರದಲ್ಲಿ ಸರಕಾರವನ್ನು ಪ್ರಶ್ನಿಸಿದ ಅರವಿಂದ್ ಕೇಜ್ರಿವಾಲ್ , ನಿಮ್ಮ ಅಧಿಕಾರ ದಾಹಕ್ಕೆ ಇನ್ನೆಷ್ಟು ಹೆಣಗಳು ಬೇಕು? ಯೋಧರ ಮನೆಹಾಳು ಮಾಡಿದ್ದೀರಿ, ಅವರ ಕುಟುಂಬಗಳನ್ನು ಅನಾಥ ಮಾಡುತ್ತಿದ್ದೀರಿ. ನಿಮ್ಮ ಅಧಿಕಾರ ದಾಹಕ್ಕಾಗಿ ಭಾರತ-ಪಾಕ್ ಗಡಿಯಲ್ಲಿ ಈ ಪರಿಸ್ಥಿತಿ ನಿರ್ಮಾಣ ಮಾಡಿದ್ದೀರಿ. ನಿಮ್ಮ ಪಕ್ಷಕ್ಕೆ ಇದು ನಾಚಿಕೆ ಎಂದು ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಭಾರತದ ಯೋಧರೊಬ್ಬರನ್ನು ಪಾಕಿಸ್ತಾನ ಅಪಹರಿಸಿದಾಗಲೂ ದೇಶದ ಪ್ರಧಾನಿ ತನ್ನ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಜಾತಿ, ಕೋಮಿನ ಒಡಕು ತಂದು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಅವರು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]