Sunday, September 19 , 2021
ಯಡಿಯೂರಪ್ಪ ಸರ್ಕಾರದಿಂದ ‘ಮಟನ್ ಭಾಗ್ಯ!’ | ಮಟನ್ ಪ್ರಿಯರಿಗೆ ಸಿಗಲಿದೆ ಶುದ್ಧ ಮಟನ್!

ಬೆಂಗಳೂರು(16.10.2019):  ರಾಜ್ಯ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸರ್ಕಾರದಿಂದಲೇ ಮಟನ್ ಸ್ಟಾಲ್ ಆರಂಭಿಸಲು ಸಿದ್ಧವಾಗಿದ್ದು, ಈ ಮೂಲಕ ಕುರಿ ಸಾಗಣೆದಾರರು ಹಾಗೂ ಉಣ್ಣೆ ಉದ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಲು ಮುಂದಾಗಿದೆ.

ಕುರಿ ಹಾಗೂ ಮೇಕೆ ಸಾಕಣೆದಾರರ ಸಹಕಾರ ಸಂಘದ ಅಧ್ಯಕ್ಷ ಬಿ.ಸಿ.ಲೋಕೇಶ್ ಗೌಡ ಇಂತಹದ್ದೊಂದು ಪ್ರಸ್ತಾಪವನ್ನು ಸರ್ಕಾರದ ಮುಂದಿಟ್ಟಿದ್ದು, ಈ ಯೋಜನೆಗೆ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್, ಕಾರ್ಯದರ್ಶಿ ರಶ್ಮಿ ಮಹೇಶ್ ಅವರೂ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಈ ಯೋಜನೆ ಸದ್ಯದಲ್ಲೇ ರಾಜ್ಯದಲ್ಲಿ ಚಾಲನೆಗೆ ಬರಲಿದೆ ಎಂದು ಹೇಳಲಾಗುತ್ತಿದೆ. ಮೊದಲು ಶಿರಾ ಮತ್ತು ಕೋಲಾರದಲ್ಲಿ ಸರ್ಕಾರಿ ಶುದ್ಧ ಮಟನ್ ಸ್ಟಾಲ್ ಆರಂಭಿಸಲು ಸರ್ಕಾರ ಮುಂದಾಗಿದೆ. ಇಲ್ಲಿ ಯಶಸ್ವಿಯಾದರೆ ರಾಜ್ಯಾದ್ಯಂತ ನಿರ್ಮಾಣಕ್ಕೆ ಸರ್ಕಾರ ಮುಂದಾಗುತ್ತದೆ ಎಂದು ಹೇಳಲಾಗಿದೆ. ಇದರ ಜೊತೆಗೆ ಡಯಲ್ ಫಾರ್ ಮಟನ್ ಆ್ಯಪ್ ಮೂಲಕವೂ ಮಟನ್ ವ್ಯಾಪಾರಕ್ಕೆ ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]