Friday, March 5 , 2021
ವಾಯುಮಾಲಿನ್ಯದ ಪರಿಣಾಮ ಬೆಂಗಳೂರಿನಲ್ಲಿ 12000 ಮಂದಿ ಬಲಿ| ಅಧ್ಯಯನ ವರದಿ

ಬೆಂಗಳೂರು (19-02-2021): ಸಿಲಿಕಾನ್ ಸಿಟಿ, ಸಿಲಿಕಾನ್ ವ್ಯಾಲಿ, ಉದ್ಯಾನನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬೆಂಗಳೂರು ನಗರದಲ್ಲಿ  ವಾಯುಮಾಲಿನ್ಯದಿಂದಾಗಿ ಕಳೆದ ವರ್ಷದಲ್ಲಿ ಸುಮಾರು 12000 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂಬ ವಿಷಯ ಖಾಸಗಿ ಸಂಸ್ಥೆಯೊಂದರ ಅಧ್ಯಯನದಿಂದ ತಿಳಿದು ಬಂದಿದೆ.

ಗ್ರೀನ್ ಪೀಸ್ ಆಗ್ನೇಯಾ ಏಷ್ಯಾ ಸಂಸ್ಥೆಯು ದೇಶದ ಬೇರೆ ಬೇರೆ ನಗರಗಳ ವಾಯುಮಾಲಿನ್ಯದ ಬಗ್ಗೆ ಅಧ್ಯಯನ ಮಾಡಿದೆ. ಗಾಳಿಯಲ್ಲಿ ಪಿಎಂ 2.5 ಕಣಗಳ ಪ್ರಮಾಣವು ಅಧಿಕವಾಗಿರುವುದು ಜನರ ಸಾವಿಗೆ ಕಾರಣವಾಗಿದೆ ಎಂದು  ಹೇಳಲಾಗಿದೆ.

ಬೆಂಗಳೂರು ಮಾತ್ರವಲ್ಲದೆ ನವದೆಹಲಿಯಲ್ಲಿ 54000, ಚೆನ್ನೈ ಮತ್ತು ಹೈದರಾಬಾದ್ ನಗರಗಳಲ್ಲಿ ತಲಾ 11000, ಲಖನೌ ನಗರದಲ್ಲಿ, 6400 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ.  ಕಳೆದ ವರ್ಷ ದೇಶದಾದ್ಯಂತ ವಾಯುಮಾಲಿನ್ಯದಿಂದ ಸುಮಾರು 1.20 ಲಕ್ಷ ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿ ಹೇಳಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]