Saturday, April 4 , 2020
ವಿಜಯ್ ವಿರುದ್ಧ ಮತ್ತೆ ಆದಾಯ ತೆರಿಗೆ ಇಲಾಖೆಯಿಂದ ಸಮನ್ಸ್

ಚೆನ್ನೈ(10.02.2020): ನಗರದ ಪನಯ್ಯೂರ್ ನಲ್ಲಿರುವ ನಟ ವಿಜಯ್ ನಿವಾಸದ ಮೇಲೆ ಶುಕ್ರವಾರ ಐಟಿ ದಾಳಿಯ ಬಳಿಕ ಇದೀಗ ಮತ್ತೊಮ್ಮೆ ವಿಜಯ್ ಅವರಿಗೆ ಆದಾಯ ತೆರಿಗೆ ಅಧಿಕಾರಿಗಳು ಸಮನ್ಸ್ ಜಾರಿಗೊಳಿಸಿದ್ದಾರೆ.

ತೆರಿಗೆ ವಂಚನೆ ಹಾಗೂ ಫೈನಾನ್ಶಿಯರ್ ಅನ್ಬು ಚರಿಯನ್ ಜೊತೆಗೆ ನಟ ವಿಜಯ್ ಅವರಿಗೆ ನಂಟಿದೆ ಎನ್ನುವ ಆರೋಪದಲ್ಲಿ ವಿಜಯ್ ವಿರುದ್ಧ ಸೋಮವಾರ ಸಮನ್ಸ್ ಜಾರಿಗೊಳಿಸಲಾಗಿದೆ ಎಜಿಎಸ್ ಸಿನೆಮಾಸ್ ಸಂಸ್ಥೆ ನಡೆಸಿದೆ ಎನ್ನಲಾದ ತೆರಿಗೆ ವಂಚನೆ ಪ್ರಕರಣದಲ್ಲಿ ನಟ ವಿಜಯ್ ಅವರನ್ನು ಗುರಿಯಾಗಿಸಲಾಗಿದೆ ಎಂದು ಹೇಳಲಾಗುತ್ತಿದೆ.

ನಟ ವಿಜಯ್ ಅವರ ಬಿಗಿಲ್ ಚಿತ್ರ 300 ಕೋಟಿ ರೂಪಾಯಿ ಗಳಿಸಿದೆ ಎಂಬ ಕಾರಣವನ್ನು ಮುಂದಿಟ್ಟುಕೊಂಡು, ವಿಜಯ್ ಅವರಿಗೆ ತಮ್ಮ ಸಂಭಾವನೆಗಿಂತಲೂ ಹೆಚ್ಚಿನ ಹಣ ನೀಡಲಾಗಿದೆ ಎನ್ನುವ ಶಂಕೆಯೆ ಮೇರೆಗೆ ಅವರ ನಿವಾಸದ ಮೇಲೆ ದಾಳಿ ನಡೆದಿತ್ತು ಎಂದು ವರದಿಯಾಗಿತ್ತು. ವಿಜಯ್ ಅವರ ಫೈನಾನ್ಶಿಯರ್ ಎಂದು ಹೇಳಲಾಗುತ್ತಿರುವ ಅನ್ಬು ನಿವಾಸಕ್ಕೆ ದಾಳಿ ನಡೆಸಿದಾಗ 65 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿತ್ತು ಎಂದು ಹೇಳಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]