Friday, March 5 , 2021
ಶಿಕ್ಷಕರ ನೇಮಕಾತಿಗೆ ಟಿಇಟಿ ಕಡ್ಡಾಯ: NCTE ಆದೇಶ

ನವದೆಹಲಿ (10-02-2021): ಈಗಾಗಲೇ ಮಾಧ್ಯಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಟಿಇಟಿಯನ್ನು ಕಡ್ಡಾಯಗೊಳಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣದ ಗುಣಮಟ್ಟವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಪದವಿಪೂರ್ವ (12ನೇ ತರಗತಿಯವರೆಗೂ) ಶಿಕ್ಷಣದ ವರೆಗೂ ಶಿಕ್ಷಕರ ನೇಮಕಾತಿಯಲ್ಲಿ ಟಿಇಟಿ ಯನ್ನು ಕಡ್ಡಾಯಗೊಳಿಸಿದೆ.

ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ಸ್ ಎಜುಕೇಶನ್ (NCTE)ಯ ಕಾರ್ಯದರ್ಶಿ ಕೇಶಂಗ್ ವೈ ಶೆರ್ಪ ಶಿಕ್ಷಕರಿಗೆ ಟಿಇಟಿ ಕಡ್ಡಾಯಗೊಳಿಸಿರುವ ಆದೇಶವನ್ನು ಹೊರಡಿಸಿದ್ದಾರೆ. ಇನ್ನುಮುಂದೆ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಲೇಬೇಕು.

NEP-2020(ರಾಷ್ಟ್ರೀಯ ಶಿಕ್ಷಣ ನೀತಿ 2020) ಈ ಶಿಕ್ಷಣ ನೀತಿಗೆ ಅನುಗುಣವಾಗಿ ದೇಶದಾದ್ಯಂತ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಬೇಕು. ಆದ್ದರಿಂದ ಎಲ್ಲಾ ಶಾಲಾಶಿಕ್ಷಣ ಹಂತದ ಶಿಕ್ಷಕರ ನೇಮಕಾತಿಯಲ್ಲಿ ಟಿಇಟಿಯಲ್ಲಿ ಕಡ್ಡಾಯವಾಗಿ ಅರ್ಹತೆ ಪಡೆಯಲೇಬೇಕೆಂದು NCTE ಆದೇಶದಲ್ಲಿ ತಿಳಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]