Sunday, September 19 , 2021
ಸಂಪೂರ್ಣ ಲಾಕ್‌ಡೌನ್ ಮಾಡಿ,‌ ಜನರಿಗೆ‌ ಪಡಿತರ, ಧನ ಸಹಾಯ ನೀಡಿ| ಸಿ.ಎಂ ಗೆ ಎನ್.ಮಹೇಶ್ ಪತ್ರ

ಕೊಳ್ಳೇಗಾಲ (07-05-2021): ಕೊರೊನಾ ‌2 ನೇ ಅಲೆ ನಗರ ಪ್ರದೇಶ ಮಾತ್ರವಲ್ಲದೆ ಗ್ರಾಮೀಣ ಪ್ರದೇಶಗಳಿಗೂ ವ್ಯಾಪಿಸಿದ್ದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ನಿಯಂತ್ರಣ ಮಾಡುವಂತೆ ಮುಖ್ಯಮಂತ್ರಿಗಳಿಗೆ ಕೊಳ್ಳೇಗಾಲದ ಶಾಸಕ ಎನ್.ಮಹೇಶ್ ಪತ್ರ ಬರೆದಿದ್ದಾರೆ.

ಸಿಎಂ ಗೆ ಬರೆದ ಪತ್ರದಲ್ಲಿ ಎನ್.ಮಹೇಶ್ ಕೊರೊನಾ ವಿಪತ್ತಿನ ಸಂದರ್ಭದಲ್ಲಿ ಜನರ ಹಿತ‌ ಮತ್ತು ಆರೋಗ್ಯ ಕಾಪಾಡಲು
ಒಂದಷ್ಟು  ಮಹತ್ವದ ಸಲಹೆಗಳನ್ನು ನೀಡಿದ್ದಾರೆ.

ಕನಿಷ್ಠ 15 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಿ,  ಕೇಂದ್ರ ಸರ್ಕಾರ ಕೊಡುತ್ತಿರುವ ಪ್ರತಿ ವ್ಯಕ್ತಿಗೆ 5 ಕೆಜಿ ಪಡಿತರದ ಜೊತೆಗೆ ರಾಜ್ಯ ಸರ್ಕಾರ ಕೂಡ ಪಡಿತರ ನೀಡಬೇಕು,
ಬಡತನ ರೇಖೆಗಿಂತ ಕೆಳಗಿರುವ 1 ಕೋಟಿ ಕುಟುಂಬಗಳಿಗೆ ಈ ಮೂಲಕ ಪಡಿತರದ ನೆರವು ನೀಡುವುದು. ಈ ಲಾಕ್ ಡೌನ್ ಅವಧಿಯಲ್ಲಿ ದಿನಕ್ಕೆ 300 ರೂಪಾಯಿಗಳಂತೆ 15 ದಿನಕ್ಕೆ 5000₹ ಧನ ಸಹಾಯ ನೀಡಬೇಕು ಮತ್ತು  ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಅಂತರ ರಾಜ್ಯ ಮತ್ತು ಅಂತರ ಜಿಲ್ಲಾ ಸಂಚಾರವನ್ನು ಸಂಪೂರ್ಣವಾಗಿ ಬಂದ್ ಮಾಡುವುದು. ಇವಿಷ್ಟು ಸಿಎಂ ಗೆ ಎನ್.ಮಹೇಶ್ ಬರೆದಿರುವ ಪತ್ರದ ಸಾರಾಂಶ. ‌

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]