Friday, October 16 , 2020
ಸಮುದ್ರ ದಂಡೆಯಲ್ಲಿ ಕಸ ಹೆಕ್ಕುವ ಪರಿಸರ ಪ್ರೇಮಿ ಪ್ರಧಾನಿಯ ಕಾರ್ಯಕ್ರಮಕ್ಕೆ ಮರಗಳ ಮಾರಣಹೋಮ!

ಒಂದೆಡೆಯಲ್ಲಿ ಸಮುದ್ರದ ದಂಡೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಸಗಳನ್ನು ಹೆಕ್ಕುತ್ತಿರುವ ವಿಡಿಯೋ. ಇನ್ನೊಂದೆಡೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಕ್ಕಾಗಿ ಮರಗಳನ್ನು ಕಡಿದು ಹಾಕಿದ ಸುದ್ದಿ. ಇವು ಸದ್ಯ ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಅಕ್ಟೋಬರ್ 17ರಂದು ಪುಣೆಯ ಸರ್ ಪರಶುರಾಮ್ ಕಾಲೇಜಿನ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕಾಗಿ ಇಲ್ಲಿ ಹಲವು ವರ್ಷಗಳಿಂದ ಇದ್ದ ಮರಗಳನ್ನು ಕಡಿದು ಹಾಕಲಾಗಿದೆ. ಈ ಸುದ್ದಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸ್ವಚ್ಛತೆಯ ಬಗ್ಗೆ ಪ್ರಧಾನಿಗಿರುವ ಕಾಳಜಿ ಪರಿಸರದ ಮೇಲೆ ಇಲ್ಲವೇ? ಎನ್ನುವ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಸಮುದ್ರದ ದಂಡೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛತೆ ನಡೆಸಿದ್ದಾರೆನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು. ಜೊತೆಗೆ ತೀವ್ರ ಟ್ರೋಲ್ ಗೂ ಒಳಗಾಗಿತ್ತು. “ಕ್ಯಾಮರಮೇನ್ ಗಳನ್ನು ಕರೆದುಕೊಂಡು ಹೋಗಿ ಕಸ ಹೆಕ್ಕುವ ಪ್ರಧಾನಿ” ಎಂದು ನರೇಂದ್ರ ಮೋದಿಯನ್ನು ಟ್ರೋಲ್ ಮಾಡಲಾಗುತ್ತಿದೆ. ಈ ನಡುವೆ ಪ್ರಧಾನಿ ಕಾರ್ಯಕ್ರಮಕ್ಕೆ ಮರಗಳನ್ನು ಕಡಿದಿರುವುದು ಮತ್ತೊಮ್ಮೆ ಪ್ರಧಾನಿ ಮೋದಿಯವರ ನಡೆಯನ್ನು ಪ್ರಶ್ನೆಗೀಡು ಮಾಡಿದೆ.

ಇನ್ನೂ ಕೇಂದ್ರ ಸಚಿವ ಪ್ರಕಾಶ್ ಜಾವಡೆಕರ್ ಅವರು ಈ ಸಂಬಂಧ ನೀಡಿರುವ ಹೇಳಿಕೆಗೂ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಪ್ರಕಾಶ್ ಜಾವಡೆಕರ್ ಈ ಸಂಬಂಧ ಪ್ರತಿಕ್ರಿಯಿಸಿ,  ಇಂತಹ ಘಟನೆಗಳು ಈ ಹಿಂದೆಯೂ ನಡೆದಿವೆ. ಆದರೆ ಕಡಿದ ಮರಗಳಿಂತ ಹೆಚ್ಚು ಮರಗಳನ್ನು ನೆಡಲಾಗಿದೆ ಎಂದು ಹೇಳಿದ್ದಾರೆ. ಆದರೆ, ಹಲವಾರು ವರ್ಷಗಳಿಂದ ಶುದ್ಧಗಾಳಿಯನ್ನು ನೀಡುತ್ತಿದ್ದ ಮರಗಳನ್ನು ಕೇವಲ ಒಂದು ಕಾರ್ಯಕ್ರಮಕ್ಕಾಗಿ ಕಡಿಯುವುದು ಎಷ್ಟು ಸೂಕ್ತ ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]