Saturday, April 4 , 2020
‘ಸೈಬರ್ ಕ್ರೈಂ’ ಇಂದಿನ ನ್ಯಾಯಾಂಗ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ | ಪ್ರಧಾನಿ ಮೋದಿ

ನವದೆಹಲಿ(22.02.2020): ಸೈಬರ್ ಕ್ರೈಂ ಇಂದಿನ ನ್ಯಾಯಾಂಗ ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದು,  ಇಂತಹ ಸವಾಲುಗಳನ್ನು ನಿಭಾಯಿಸಲು ಆಧುನಿಕ ತಂತ್ರಜ್ಞಾನವನ್ನು ಉನ್ನತೀಕರಣಗೊಳಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ ನ್ಯಾಯಾಂಗ ಸಮಾವೇಶದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ಮತ್ತು ನ್ಯಾಯ ನಿರ್ಣಯ ಹಂತಗಳಲ್ಲಿ ಪರಿಣಾಮಕಾರಿಯಾಗಿ ಉಪಯೋಗಿಸಿಕೊಳ್ಳುತ್ತಿರುವುದು ಮೆಚ್ಚುವ ಸಂಗತಿ. ಇದನ್ನು ಮತ್ತಷ್ಟು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವಂತೆ ನ್ಯಾಯಾಂಗ ವ್ಯವಸ್ಥೆಗೆ ಸಲಹೆ ನೀಡಿದರು.

ಅಭಿವೃದ್ಧಿ ಹಾಗೂ ಪರಿಸರ ಸಂರಕ್ಷಣೆ ಇವೆರಡರ ಸಮತೋಲನ ಅಗತ್ಯವಾಗಿದೆ ಎಂದ ಅವರು ಸಮಾನತೆಯ ಕುರಿತು ಮಾತನಾಡಿ, ಯಾವುದೇ ಸಮಾಜ ಅಥವಾ ದೇಶವು ಲಿಂಗ ಸಮಾನತೆ ಇಲ್ಲದೆ ಅಭಿವೃದ್ಧಿಗೊಳ್ಳಲು ಸಾಧ್ಯವಿಲ್ಲ ಎಂದರು. ಜೊತೆಗೆ ತ್ರಿವಳಿ ತಲಾಕ್, ಧಾರ್ಮಿಕ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಪ್ರವೇಶಾವಕಾಶ, ದಿವ್ಯಾಂಗರ ಹಕ್ಕು ರಕ್ಷಣೆ ಇತ್ಯಾದಿ ವಿಷಯಗಳ ಐತಿಹಾಸಿಕ ತೀರ್ಪನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]