Monday, July 26 , 2021
ವೃತ್ತಿ ಧರ್ಮವನ್ನೂ ನಾಶ ಮಾಡುವ ದ್ವೇಷ ರಾಜಕಾರಣ| ನಾ.ದಿವಾಕರ. ಭಾಗ-1

ಭಾರತದ ಪ್ರಜಾತಂತ್ರ ವ್ಯವಸ್ಥೆ ನಾಲ್ಕೂ ದಿಕ್ಕುಗಳಿಂದ ಸವಾಲುಗಳನ್ನು ಎದುರಿಸುತ್ತಿದೆ. ಆಡಳಿತ ವ್ಯವಸ್ಥೆಯ ನಾಲ್ಕೂ ಸ್ತಂಭಗಳು ಶಿಥಿಲವಾಗುತ್ತಿರುವಂತೆ ಭಾಸವಾಗುತ್ತಿದೆ. ನ್ಯಾಯಾಂಗದ ಮೂಲಕ ಈ ದೇಶದ ಸಾಮಾನ್ಯ ಪ್ರಜೆಗಳು ಕೊಂಚ ಉಸಿರಾಡುತ್ತಿದ್ದರೂ ಕೆಲವು ಸಂದರ್ಭಗಳಲ್ಲಿ ನ್ಯಾಯಾಂಗವೂ ಮುಂಚಿನಂತಿಲ್ಲ ಎಂದೆನಿಸಿದರೆ ಅಚ್ಚರಿಯೇನಿಲ್ಲ.

ಇದು ಇಂದಿನ ಸಮಸ್ಯೆಯೂ ಅಲ್ಲ. ಅಧಿಕಾರ ರಾಜಕಾರಣದ ಒತ್ತಡಗಳು ನ್ಯಾಯಾಂಗದ ಮೇಲೆ ಪ್ರಭಾವ ಬೀರುವ ಪರಂಪರೆಗೆ ಐದು ದಶಕಗಳ ಇತಿಹಾಸವಿದೆ. ಒಂದೇ ವ್ಯತ್ಯಾಸ ಎಂದರೆ ಮೂರು ನಾಲ್ಕು ದಶಕಗಳ ಹಿಂದೆ ಇದ್ದಂತಹ ದಕ್ಷ, ನಿಷ್ಪಕ್ಷಪಾತ, ದಿಟ್ಟ ನ್ಯಾಯಮೂರ್ತಿಗಳನ್ನು ಇಂದು ಕಾಣುವುದು ವಿರಳ. ಶಾಸಕಾಂಗ ಮತ್ತು ಕಾರ್ಯಾಂಗಗಳು ಭ್ರಷ್ಟ ಹಾದಿ ಹಿಡಿದಿರುವ ಒಂದು ಶಿಥಿಲವಾಗುತ್ತಿರುವ ವ್ಯವಸ್ಥೆಯಲ್ಲಿ ಇದು ಸಹಜ ಪ್ರಕ್ರಿಯೆಯೇನೋ ಎನಿಸುತ್ತದೆ.

ಪ್ರಜಾತಂತ್ರ ವ್ಯವಸ್ಥೆ ಶಿಥಿಲವಾಗುತ್ತಿರುವ ಸಂದರ್ಭದಲ್ಲಿ, ಸಂವಿಧಾನ ಮತ್ತು ಪ್ರಜಾತಂತ್ರ ಮೌಲ್ಯಗಳ ಉಲ್ಲಂಘನೆಯಾಗುತ್ತಿರುವ ಹೊತ್ತಿನಲ್ಲಿ ಪ್ರಜೆಗಳಲ್ಲಿ ಜಾಗೃತಿ ಮೂಡಿಸುವ ಹೊಣೆಗಾರಿಕೆ ಮೂಲತಃ ಮಾಧ್ಯಮಗಳ ಮೇಲಿರುತ್ತದೆ. 1970ರ ದಶಕದಲ್ಲಿ ಮತ್ತು ಸ್ವತಂತ್ರ ಭಾರತದ ಆರಂಭದ ದಿನಗಳಲ್ಲೂ ಸಹ ಭಾರತದ ಸುದ್ದಿ ಮಾಧ್ಯಮಗಳು ಈ ಜವಾಬ್ದಾರಿಯನ್ನು ನಿಭಾಯಿಸಿವೆ.

ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಸಂವಹನ ಮಾಧ್ಯಮದ ವ್ಯಾಪ್ತಿ ಸೀಮಿತವಾಗಿದ್ದ ಸಂದರ್ಭದಲ್ಲೂ ಮಾಧ್ಯಮಗಳು , ಪತ್ರಿಕೆಗಳು ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದ್ದನ್ನು ಸ್ಮರಿಸಬಹುದು. ಆಗಲೂ ಭಾರತದ ಸುದ್ದಿಮನೆಗಳು ಉದ್ಯಮಿಗಳ, ಪ್ರಬಲ ಮೇಲ್ಜಾತಿಗಳ ಮತ್ತು ಕೆಲವು ರಾಜಕೀಯ ನಾಯಕರ ಒಡೆತನದಲ್ಲೇ ಇದ್ದವು. ಆದರೆ ವೃತ್ತಿ ಧರ್ಮದ ಬಗ್ಗೆ ಪ್ರಜ್ಞೆಯೂ ಇತ್ತು. ಹಾಗಾಗಿ ಆಡಳಿತ ವ್ಯವಸ್ಥೆಯ ಓರೆಕೋರೆಗಳನ್ನು ತಿದ್ದುವ ಕೆಲಸವನ್ನು ಮಾಡುತ್ತಿದ್ದವು. ಇದಕ್ಕೆ ಮೂಲ ಕಾರಣ ಪತ್ರಿಕಾ ಸಂಪಾದಕರಿಗೆ ವೃತ್ತಿ ನಿಷ್ಠೆಯಷ್ಟೇ ಸಂವಿಧಾನ ನಿಷ್ಠೆಯೂ ಇತ್ತು. ಇಂದು ಇದು ಮರೆಯಾಗುತ್ತಿದೆ.

ಮುಂದುವರೆಯುವುದು…

-ನಾ.ದಿವಾಕರ,
ಖ್ಯಾತ ಲೇಖಕರು, ಅಂಕಣಕಾರರು

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]