Monday, July 26 , 2021
ತೃತೀಯ ಲಿಂಗಿಗಳಿಗೆ ಶೇ. 1 ರಷ್ಟು ಮೀಸಲಾತಿ

ಬೆಂಗಳೂರು (21.07.2021) : ಸರ್ಕಾರಿ ಉದ್ಯೋಗಗಳಲ್ಲಿ ತೃತೀಯ ಲಿಂಗಿಗಳಿಗೆ 1 ಪ್ರತಿಶತ ಮೀಸಲಾತಿಯನ್ನು ಒದಗಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ತೃತೀಯ ಲಿಂಗಿ ಅಭ್ಯರ್ಥಿಗಳಿಗೆ ಈ ಮೀಸಲಾತಿಯು ಸಾಮಾನ್ಯ ಮೆರಿಟ್, ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗಗಳಲ್ಲಿ ಮೀಸಲಾತಿಗಳನ್ನು ಪಡೆದುಕೊಳ್ಳಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರನ್ನು ಒಳಗೊಂಡಿದ್ದ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರದ ಪರ ವಕೀಲರು ಜುಲೈ 6 ರಂದು ತೃತೀಯ ಲಿಂಗಿಗಳಿಗೆ ನೀಡುವ ಮೀಸಲಾತಿಗೆ ಸಂಬಂಧಪಟ್ಟಂಥೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು 2021 ಕ್ಕೆ ತಿದ್ದುಪಡಿ ಮಾಡಲಾಗಿದೆ. ತಿದ್ದುಪಡಿಯ ಮೂಲಕ, ಲಿಂಗಪರಿವರ್ತಿತ ಸಮುದಾಯಕ್ಕೆ 1 ಪ್ರತಿಶತ ಅಡ್ಡವಾದ ಮೀಸಲಾತಿಯನ್ನು ಒದಗಿಸಲು ನಿಯಮ 9, ಉಪ ನಿಯಮ (1) (ಡಿ) ಅನ್ನು ಅಳವಡಿಸಲಾಗಿದೆ ಎಂದು ಹೇಳಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]