Monday, July 26 , 2021
ದಕ್ಷಿಣ ಆಫ್ಘಾನಿಸ್ತಾನದಲ್ಲಿ ಬರೋಬ್ಬರಿ 109 ತಾಲಿಬಾನ್ ಉಗ್ರರ ಹತ್ಯೆ

ಕಾಬೂಲ್ (12.07.2021) : ಆಪ್ಘಾನಿಸ್ತಾನದ ದಕ್ಷಿಣ ಪ್ರಾಂತ್ಯದಲ್ಲಿ ಅಫ್ಘಾನಿಸ್ತಾನದ ರಕ್ಷಣಾ ಹಾಗೂ ಭದ್ರತಾ ಪಡೆಗಳು ನಡೆಸಿದ ದಾಳಿಗೆ 109 ಮಂದಿ ತಾಲಿಬಾನ್ ಉಗ್ರರು ಹತರಾಗಿದ್ದು, 25 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಂದಹಾರ್ ಪ್ರಾಂತ್ಯದಲ್ಲಿ 70 ಮಂದಿ ಉಗ್ರರನ್ನು ಹತ್ಯೆ ಮಾಡಿದ್ದರೆ, 8 ಮಂದಿ ಇತರರು ಗಾಯಗೊಂಡಿದ್ದಾರೆ. ಅಫ್ಘಾನ್ ವಾಯು ಪಡೆ (ಎಎಎಫ್) ನ ಸಹಕಾರದಲ್ಲಿ ಎಎನ್ ಡಿಎಸ್ ಎಫ್ ಈ ಕಾರ್ಯಾಚರಣೆ ನಡೆಸಿದೆ.

ಪ್ರಾಂತೀಯ ರಾಜಧಾನಿ ಕಂದಹಾರ್ ನಗರದ ಪೊಲೀಸ್ ಜಿಲ್ಲೆ 7 ಹಾಗೂ ನೆರೆಯ ಸಬ್ ಅರ್ಬನ್ ದಾಂಡ್ ಜಿಲ್ಲೆಯಲ್ಲಿ ಸೇನೆಯ ಕಾರ್ಯಾಚರಣೆ ಬಗ್ಗೆ ಸೇನೆಯ 205 ಅಟ್ಟಾಲ್ ಕಾರ್ಪ್ಸ್ ಹೇಳಿಕೆ ಬಿಡುಗಡೆ ಮಾಡಿದೆ.

ಇದಕ್ಕೂ ಮುನ್ನ ಶುಕ್ರವಾರದಂದು ತಾಲಿಬಾನ್ ಎಎನ್ ಡಿಎಸ್ ಎಫ್ ನ ಸ್ಥಾನಗಳ ಮೇಲೆ ದಾಳಿ ನಡೆಸಿ ಕಂದಹಾರ್ ನಗರಕ್ಕೆ ನುಸುಳಲು ಯತ್ನಿಸಿತ್ತು. ಪರಿಣಾಮ ದಿನವಿಡೀ ಯುದ್ಧಗ್ರಸ್ತ ವಾತಾವರಣ ನಿರ್ಮಾಣವಾಗಿತ್ತು. ಈ ವೇಳೆ ಹೆಲ್ಮಾಂಡ್ ಪ್ರಾಂತ್ಯದಲ್ಲಿ 39 ತಾಲಿಬಾನ್ ಉಗ್ರರನ್ನು ಹತ್ಯೆ ಮಾಡಲಾಗಿತ್ತು, ಕಾರ್ಯಾಚರಣೆಯಲ್ಲಿ 17 ಮಂದಿ ಗಾಯಗೊಂಡಿದ್ದರು. ಸ್ಥಳೀಯವಾಗಿ ತಾಲಿಬಾನ್ ಗೆ ಪ್ರಮುಖವಾಗಿದ್ದ ಇಬ್ಬರು ನಾಯಕರನ್ನು ಹತ್ಯೆ ಮಾಡಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]