
ನವದೆಹಲಿ (24.0.2021): ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗೆ (CAPF) 50 ಸಾವಿರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡ್ನ್ಯೂಸ್ ನೀಡಿದ್ದಾರೆ.
ಕೇಂದ್ರ ಗೃಹ ಇಲಾಖೆಯಡಿ ಕಾರ್ಯನಿರ್ವಹಿಸುವ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗೆ 50 ಸಾವಿರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯನ್ನು ಪಾರಂಭಿಸಲಿದ್ದೇವೆ. ಮುಂದಿನ ಐದು ವರ್ಷಗಳಲ್ಲಿ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯಿಂದ ನಿರ್ಗಮಿಸಿದ ಪ್ರತಿಯೊಬ್ಬರ ಸ್ಥಾನಕ್ಕೆ ಹೊಸದಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
50 ಸಾವಿರ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಸಿಬ್ಬಂದಿ ನೇಮಕಾತಿಯಿಂದ ಪ್ರತಿಯೊಬ್ಬ ಸಿಎಪಿಎಫ್ ಯೋಧನಿಗೆ 1 ವರ್ಷದಲ್ಲಿ 100 ದಿನಗಳ ಕಾಲ ಮನೆಯಲ್ಲಿ ಉಳಿಯಲು ಅವಕಾಶವಿರುತ್ತದೆ. 2022 ರ ವೇಳೆಗೆ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ ಸಂತೃಪ್ತಿ ಅನುಪಾತ ಶೇ. 55 ಕ್ಕೆ ಹೆಚ್ಚಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಮಾಹಿತಿ ನೀಡಿದರು.