
ಬೆಂಗಳೂರು (22.02.2021) : ರಾಜ್ಯದಲ್ಲಿ ಇಂದಿನಿಂದ 6ರಿಂದ 8ನೇ ತರಗತಿಗಳು ಆರಂಭವಾಗಲಿದೆ. ಬಿಬಿಎಂಪಿ ಮತ್ತು ಕೇರಳ ಗಡಿ ಭಾಗದ ಶಾಲೆಗಳಲ್ಲಿ 8ನೇ ತರಗತಿ ಮಾತ್ರ ಆರಂಭವಾಗಲಿದೆ. ಆದರೆ ಮಹಾರಾಷ್ಟ್ರದ ಗಡಿ ಭಾಗದ ಶಾಲೆಗಳ ಬಗ್ಗೆ ಶಿಕ್ಷಣ ಇಲಾಖೆ ಇನ್ನೂ ಸ್ಪಷ್ಟತೆ ನೀಡಿಲ್ಲ.
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಆತಂಕ ಹೆಚ್ಚಾಗುತ್ತಿದ್ದು, ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವವರಿಗೆ ಕೊರೊನಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. 6ರಿಂದ 8ನೇ ತರಗತಿ ಆರಂಭವಾಗುತ್ತಿರುವ ಕಾರಣ ಶಾಲೆಗಳಲ್ಲಿ ಸುರಕ್ಷೆಗೆ ಆದ್ಯತೆ ನೀಡಬೇಕು ಎಂದು ಇಲಾಖೆ ಸೂಚಿಸಿದೆ
ಸಾಮಾಜಿಕ ಅಂತರಕ್ಕೆ ವಿಶೇಷ ಒತ್ತು ನೀಡಬೇಕು. ಸ್ಯಾಂಡ್ ಸ್ಯಾನಿಟೈಸರ್, ಮಾಸ್ಕ್ ಬಳಕೆ ಕಡ್ಡಾಯ ವಾಗಿದ್ದು, ನಿತ್ಯವೂ ಥರ್ಮಲ್ ಸ್ಕ್ರೀನಿಂಗ್ ನಡೆಸಬೇಕು ಎಂದು ತಿಳಿಸಲಾಗಿದೆ.