Sunday, May 9 , 2021
84 ನೇ ವಸಂತಕ್ಕೆ ಕಾಲಿಟ್ಟ ಗಾನಕೋಗಲೆ

ರಾಷ್ಟ್ರಧ್ವನಿ ಸಿ‌ನಿಡೆಸ್ಕ್ (23-04-2021): ಭಾರತದ ಮಹಾನ್ ಸಂಗೀತ ತಾರೆ, ಪ್ರಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್.ಜಾನಕಿ ಅವರು ಇಂದು 84 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಗಾನಕೋಗಿಲೆ ಎಂದೇ ಜನಪ್ರಿಯತೆ ಪಡೆದಿರುವ ಜಾನಕಿ ಅವರು ಇಲ್ಲಿಯವರೆಗೂ 17 ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 48000 ಗೀತೆಗಳನ್ನು ಹಾಡಿದ್ದಾರೆ. ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೇ ಎಂಬ ಗ್ರಾಮದಲ್ಲಿ ಏಪ್ರಿಲ್ 23, 1938 ರಲ್ಲಿ ಜನಿಸಿದರು. 1957 ರಲ್ಲಿ  ತಮಿಳು ಚಿತ್ರ ‘ವಿಧಿಯಿನ್ ವಿಳಯಾಟ್ಟು’ ಚಿತ್ರದ ಮೂಲಕ ಹಿನ್ನೆಲೆ ಗಾಯನ ಪ್ರಾರಂಭ ಮಾಡಿದರು.

1957 ರಲ್ಲಿ ತೆರೆಕಂಡ  ‘ರಾಯರ ಸೊಸೆ’ ಚಿತ್ರದ ಮೂಲಕ ಕನ್ನಡದಲ್ಲಿ ಗಾಯನ ಪ್ರಾರಂಭ ಮಾಡಿದ ಎಸ್.ಜಾನಕಿ ಅವರು ಪಿ.ಬಿ. ಶ್ರೀನಿವಾಸ್, ಡಾ.ರಾಜ್‍ಕುಮಾರ್ ಮುಂತಾದವರ ಜೊತೆಯಲ್ಲಿ ಹಾಡುವ ಮೂಲಕ ಜನಪ್ರಿಯತೆ ಗಳಿಸಿದ್ದಾರೆ. ಅಲ್ಲದೆ ಕನ್ನಡ ನಾಡಿನಾದ್ಯಂತ ಅಸಂಖ್ಯಾತ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲೆಯಾಳಂ, ಹಿಂದಿ ಸೇರಿದಂತೆ ಬಹುತೇಕ ಭಾರತದ ಎಲ್ಲಾ ಭಾಷೆಗಳಲ್ಲಿ ಸಾವಿರಾರು ಗೀತೆಗಳನ್ನು ಹಾಡಿದ್ದಾರೆ.

ಗಾನಗೋಗಿಲೆ ಎಸ್.ಜಾನಕಿ ಅವರನ್ನು ಕರ್ನಾಟಕ ಸರ್ಕಾರ 2014 ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ‌ಹಾಗೆಯೇ
ಮೈಸೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿ ನೀಡಿದೆ. 2013 ರಲ್ಲಿ ಭಾರತ ಸರ್ಕಾರ ಪದ್ಮಭೂಷಣ ಪ್ರಶಸ್ತಿಯನ್ನು ಎಸ್. ಜಾನಕಿ ಅವರಿಗೆ ಘೋಷಿಸಿದಾಗ ಅದನ್ನು ಅವರು ತಿರಸ್ಕರಿಸಿ ಸುದ್ದಿಯಾಗಿದ್ದರು.  ಪದ್ಮ ಪ್ರಶಸ್ತಿಗಳಲ್ಲಿ ದಕ್ಷಿಣ ಭಾರತೀಯ ಕಲಾವಿದರ ಬಗ್ಗೆ ಇರುವ ಕೇಂದ್ರದ ತಾತ್ಸಾರ ಮನೋಭಾವವನ್ನು ವಿರೋಧಿಸಿ ಪ್ರಶಸ್ತಿ ತಿರಸ್ಕರಿಸಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]