ಮೈಸೂರು: ಡಾ. ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ಉಂಟಾದ ಘರ್ಷಣೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಹಲವು ಮನೆಗಳ ಮೇಲೆ ಕಲ್ಲು ತೂರಾಟ ನಡೆದಿದ್ದು, ಮನೆ ಮುಂದಿದ್ದ ವಾಹನಗಳಿಗೂ ಹಾನಿ ಎಸಗಲಾಗಿದೆ.
ಹಲ್ಲರೆ ಗ್ರಾಮ ಉದ್ವಿಗ್ನವಾಗಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಾಗಿದೆ. ಎಸ್ಪಿ ಸೀಮಾ ಲಾಟ್ಕರ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.