ಜೈಪುರ: ರಾಜಸ್ಥಾನದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಸರಸ್ವತಿ ಮೂರ್ತಿ ಕಡ್ಡಾಯವಾಗಿ ಪ್ರತಿಷ್ಠಾಪಿಸಬೇಕೆಂದು ಅಲ್ಲಿನ ಶಿಕ್ಷಣ ಸಚಿವ ಮದನ್ ದಿಲಾವರ ಆದೇಶಿಸಿದ್ದಾರೆ. ಶಾಲೆಯ ಮುಖ್ಯದ್ವಾರದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಯಾವುದಾದರೂ ಶಾಲೆಯಲ್ಲಿ ಸರಸ್ವತಿ ಭಾವಚಿತ್ರ ಅಥವಾ ಮೂರ್ತಿ ಇಲ್ಲದಿದ್ದರೆ ಅಂತಹ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಲೂ ಹಿಜಾಬ್ ವಿವಾದ ಭುಗಿಲೆದ್ದಿದ್ದು, ಬಿಜೆಪಿಯ ಭಜನ್‍ಲಾಲ್ ಶರ್ಮಾ ಅಧಿಕಾರಕ್ಕೇರಿದ ಬಳಿಕ ಮುಸ್ಲಿಂ ವಿರೋಧಿ ನೀತಿಗಳನ್ನು ಜಾರಿಗೆ ಮುಂದಾಗಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ.
ಅಲ್ಲದೇ ರಾಜಸ್ಥಾನದ ಸರ್ಕಾರಿ ಶಾಲೆಗಳಲ್ಲಿ ಮಾತ್ರವಲ್ಲದೆ ಖಾಸಗಿ ಶಾಲೆಗಳು ಮತ್ತು ಮದರಸಾಗಳಲ್ಲಿಯೂ ಹಿಜಾಬ್‍ನ್ನು ನಿಷೇಧಿಸಬೇಕು ಎಂದು ರಾಜಸ್ಥಾನದ ಹಿರಿಯ ಸಚಿವ ಕಿರೋರಿ ಲಾಲ್ ಮೀನಾ ಅವರೂ ಒತ್ತಾಯಿಸಿದ್ದಾರೆ.