ಇದೀಗ ಬಂದ ಸುದ್ದಿ
Sat. Dec 21st, 2024

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರಾವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಫೆ 29ರವರೆಗೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ ಹೆಗ್ಡೆಯವರ ಅಧಿಕಾರಾವಧಿ ವಿಸ್ತರಿಸಲಾಗಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ.

ಇನ್ನು 15 ದಿನಗಳೊಳಗೆ ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಕಳೆದ ನವೆಂಬರ್‍ನಲ್ಲಿ ಹೆಗ್ಡೆ ಅಧಿಕಾರಾವಧಿ ಮುಗಿದಿತ್ತು. ಆಗ ಎರಡು ತಿಂಗಳ ವಿಸ್ತರಣೆ ಮಾಡಲಾಗಿತ್ತು.

ಈಗ ಜ 31ಕ್ಕೆ ಅಧಿಕಾರಾವಧಿ ಮುಗಿದಿರುವುದರಿಂದ, ಮತ್ತೆ ಒಂದು ತಿಂಗಳು ಅಧಿಕಾರವಧಿ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಆ ಮೂಲಕ ಕಾಂತರಾಜ್ ಜಾತಿಗಣತಿ ವರದಿ ಸಿದ್ದರಾಮಯ್ಯ ಸರ್ಕಾರ ಸ್ವೀಕರಿಸುವುದು ಬಹುತೇಕ ಖಚಿತವಾದಂತಿದೆ ಎನ್ನಲಾಗಿದೆ.

Related Post

Leave a Reply

Your email address will not be published. Required fields are marked *