ತಿರುವನಂತಪುರಂ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ )ಯನ್ನು ಕೇರಳದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸ್ಪಷ್ಟಪಡಿಸಿದ್ದಾರೆ.
ಸಾಹಿತ್ಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪೌರತ್ವ ತಿದ್ದುಪಡಿ ಕಾಯ್ದೆ ಒಂದು ವರ್ಗದ ನಾಗರಿಕರನ್ನು ಪ್ರತ್ಯೇಕಗೊಳಿಸುವ ಗುರಿ ಹೊಂದಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಶೀ್ಘ್ರ ಜಾರಿಗೆ ಬರಲಿದೆ ಎಂಬ ಸುದ್ದಿಯಿದೆ. ಕೇರಳದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲವೆಂದು ನಾವು ಹೇಳಿದ್ದೇವೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.
ಜಾತ್ಯತತೀತ ರಾಷ್ಟ್ರದಿಂದ ಧಾರ್ಮಿಕ ರಾಷ್ಟ್ರವಾಗಿ ಬದಲಾಯಿಸಲು ದೇಶದಲ್ಲಿ ತೀವ್ರಗತಿಯ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.