ಮುಂಬೈ: ಮಹಾರಾಷ್ಟ್ರ ಸೀಎಂ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಯ ಮುಖಂಡರೊಬ್ಬರ ಮೇಲೆ ಬಿಜೆಪಿ ಶಾಸಕರೊಬ್ಬರು ಪೊಲೀಸ್ ಠಾಣೆಯಯಲ್ಲೇ ಗುಂಡು ಹಾರಿಸಿದ ಆಘಾತಕಾರಿ ಘಟನೆ ವರದಿಯಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿ ಮಹೇಶ್ ಗಾಯಕ್ವಾಡ್ ಮೇಲೆ ಗಣಪತ್ ಗಾಯಕ್ವಾಡ್ ಗುಂಡು ಹಾರಿಸಿದ್ದಾರೆ. ಆರೋಪಿ ಶಾಸಕನನ್ನು ಪೊಲೀಸರು ಬಂಧಿಸಿದ್ದಾರೆ.
ಥಾಣೆಯ ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಗಣಪತ್ ಗಾಯಕ್ವಾಡ್ ಬೆಂಬಲಿಗರು ಮಹೇಶ್ ಗಾಯಕ್ವಾಡ್ ಬೆಂಬಲಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮಹೇಶ್ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ.
ಭೂ ವಿವಾದಕ್ಕೆ ಸಂಬಂಧಿಸಿ ಠಾಣೆಯಲ್ಲಿ ವಾಗ್ವಾದ ನಡೆದಿದೆ. ವಾಗ್ವಾದ ತೀವ್ರಗೊಂಡು ಪರಸ್ಪರ ಹಲ್ಲೆ ಎಸಗಲಾಗಿದೆ. ಎರಡೂ ಗುಂಪಿನವರಿಗೆ ಗಾಯಗಳಾಗಿವೆ. ಈ ನಡುವೆ ಶಾಸಕ ಶೂಟೌಟ್ ನಡೆಸಿದ್ದಾರೆ.