ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಗೆ ಭಾರತ ರತ್ನ ಪ್ರಶಸ್ತಿ ನೀಡುವ ಬಗ್ಗೆ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಘೋಷಿಸಿದ್ದಾರೆ.
ಎಲ್.ಕೆ. ಅಡ್ವಾಣಿಯವರಿಗೆ ಭಾರತರತ್ನ ನೀಡಲಾಗುತ್ತಿದೆ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಘೋಷಿಸಿದ್ದಾರೆ. ಎಲ್.ಕೆ. ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗುತ್ತಿದೆ. ನಾನು ಅವರೊಂದಿಗೆ ಮಾತನಾಡಿದ್ದೇನೆ. ಈ ಗೌರವವನ್ನು ಪಡೆದಿರುವುದಕ್ಕೆ ಅವರನ್ನು ಅಭಿನಂದಿಸಿದೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜನೀತಿಜ್ಞರಲ್ಲಿ ಒಬ್ಬರಾದ ಅವರು ಭಾರತದ ಅಭಿವೃದ್ಧಿಗೆ ನೀಡಿದ ಕೊಡುಗೆ ಸ್ಮರಣೀಯವಾಗಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.