ನವದೆಹಲಿ: ಸದ್ಗುರು ಜಗ್ಗಿ ವಾಸುದೇವ್ ಅವರ ಈಶಾ ಫೌಂಡೇಶನ್ ವತಿಯಿಂದ ಈಚೆಗೆ ನಡೆದ ಇನ್ನರ್ ಎಂಜಿನಿಯರಿAಗ್ ಲೀಡರ್‌ಶಿಪ್ ಕಾರ್ಯಾಗಾರದಲ್ಲಿ ಕೇಂದ್ರದ ನೂರಕ್ಕೂ ಹೆಚ್ಚು ನಾಗರಿಕ ಸೇವೆಯ ಅಧಿಕಾರಿಗಳು ಪಾಲ್ಗೊಂಡಿದ್ದಾರೆ. ಕೇಂದ್ರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಈಶಾ ಫೌಂಡೇಶನ್ ವತಿಯಿಂದ ಜ ೨೯ರಿಂದ ಫೆ ೨ರವರೆಗೆ ಕಾರ್ಯಾಗಾರ ಕೊಯಮತ್ತೂರಿನಲ್ಲಿ ನಡೆಯಿತು.
ನೂರಕ್ಕೂ ಹೆಚ್ಚು ಐಎಎಸ್, ಐಪಿಎಸ್, ಐಆರ್‌ಎಸ್ ಅಧಿಕಾರಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದರು. ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದರಿಂದ ಅವರ ವೃತ್ತಿ, ವೈಯಕ್ತಿಕ ಜೀವನದಲ್ಲಿ ಹಾಗೂ ರಾಷ್ಟç ನಿರ್ಮಾಣ ಕಾರ್ಯದಲ್ಲಿ ಸಹಾಯವಾಗಲಿದೆ ಎನ್ನುವುದು ನಮ್ಮ ವಿಶ್ವಾಸ ಎಂದು ಈಶಾ ಫೌಂಡೇಶನ್ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.
ಇತ್ತೀಚಿನ ವರ್ಷಗಳಲ್ಲಿ ೮೦೦ಕ್ಕೂ ಹೆಚ್ಚು ಕೇಂದ್ರ ನಾಗರಿಕ ಸೇವೆ ಅಧಿಕಾರಿಗಳನ್ನು ಇನ್ನರ್ ಎಂಜಿನಿಯರಿAಗ್ ಲೀಡರ್‌ಶಿಪ್ ಅಡಿ ತರಬೇತುಗೊಳಿಸಲಾಗಿದೆ ಎಂದು ಫೌಂಡೇಶನ್ ಹೇಳಿದೆ.