ಗಾಂಧಿನಗರ: ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸುವ ನಿರ್ಣಯವನ್ನು ಗುಜರಾತ್ ವಿಧಾನಸಭೆಯಲ್ಲಿ ಕೈಗೊಳ್ಳಲಾಗಿದೆ. ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಶಿಕ್ಷಣ ಇಲಾಖೆ ಇತ್ತೀಚೆಗೆ ನಿರ್ಧಾರ ಕೈಗೊಂಡಿತ್ತು. ಆ ನಿರ್ಧಾರವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಬಿಜೆಪಿ ಸರ್ಕಾರ ಈ ಮಹತ್ವದ ನಿರ್ಣಯವನ್ನು ವಿಧಾನಸಭೆಯಲ್ಲೇ ಕೈಗೊಂಡಿದೆ.
ನಿರ್ಣಯವನ್ನು ಆಮ್ ಆದ್ಮಿ ಪಕ್ಷ ಸ್ವಾಗತಿಸಿತ್ತು. ಆರಂಭದಲ್ಲಿ ವಿರೋಧಿಸಿದ್ದ ಕಾಂಗ್ರೆಸ್ ವಿಧಾನಸಭೆಯಲ್ಲಿ ಮತದಾನದ ವೇಳೆ ನಿರ್ಣಯದ ಪರ ನಿಂತಿದೆ. ಹೀಗಾಗಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರವಾಗಿದೆ.
೬ರಿಂದ ೧೨ನೇ ತರಗತಿ ವರೆಗೆ ಭಗವದ್ಗೀತೆಯನ್ನು ಬೋಧಿಸಲಾಗುವುದು. ಶಿಕ್ಷಣ ಸಚಿವ ಪ್ರಫುಲ್ ಪನ್ಶೇರಿಯಾ ನಿರ್ಣಯ ಮಂಡಿಸಿದ್ದರು.