ಹಲ್ದವಾನಿ: ಅಕ್ರಮವಾಗಿ ಕಟ್ಟಲಾಗಿದ್ದ ಮದರಸಾ ಮತ್ತು ಮಸೀದಿಯೊಂದನ್ನು ಬುಲ್ಡೋಜರ್‍ನಿಂದ ಒಡೆದು ಹಾಕಿದ ಘಟನೆಗೆ ಸಂಬಂಧಿಸಿ ಉತ್ತರಾಖಂಡದ ಹಲ್ದವಾನಿಯಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ. ಘಟನೆಯಲ್ಲಿ ನಾಲ್ವರು ಸಾವಿಗೀಡಾಗಿದ್ದು, 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕೋರ್ಟ್ ಆದೇಶದಂತೆ ಅಕ್ರಮವಾಗಿ ಕಟ್ಟಲಾಗಿದ್ದ ಮದರಸಾ ಮತ್ತು ಮಸೀದಿಯ ಭಾಗವೊಂದನ್ನು ತೆರವುಗೊಳಿಸಲಾಗಿತ್ತು.
ಪೊಲೀಸ್ ಸಿಬ್ಬಂದಿ, ಮುನ್ಸಿಪಲ್ ಕಾರ್ಪೊರೇಶನ್ ಅಧಿಕಾರಿಗಳು, ಪತ್ರಕರ್ತರ ಮೇಲೂ ಕಲ್ಲು ತೂರಾಟ ನಡೆದಿದೆ. ಹಿಂಸಾಚಾರದ ಹಿನ್ನೆಲೆಯಲ್ಲಿ ನಗರದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ. ಕಂಡಲ್ಲಿ ಗುಂಡು ಆದೇಶ ಜಾರಿಗೊಳಿಸಲಾಗಿದೆ ಎಂದೂ ವರದಿಯಾಗಿದೆ.