ಇದೀಗ ಬಂದ ಸುದ್ದಿ
Sat. Dec 21st, 2024

ದಾವಣಗೆರೆ: ಪ್ರಚೋದನಕಾರಿ ಹೇಳಿಕೆ ನೀಡಿರುವ ಬಿಜೆಪಿ ಹಿರಿಯ ನಾಯಕ ಕೆ. ಎಸ್, ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದೆ.
ಬಡಾವಣೆ ಠಾಣೆಯಲ್ಲಿ ಹನುಮಂತ ಎಂಬವರು ಈಶ್ವರಪ್ಪ ವಿರುದ್ಧ ದೂರು ನೀಡಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಈಶ್ವರಪ್ಪ ನೀಡಿರುವ ಹೇಳಿಕೆಯಿಂದ ಜನ, ಸಮುದಾಯ, ಗುಂಪುಗಳ ನಡುವೆ ದ್ವೇಷ ಭಾವನೆ ಉಂಟು ಮಾಡುತ್ತದೆ. ಗಲಭೆಗಳು ಜರುಗಬಹುದು ಎಂದು ಗೊತ್ತಿದ್ದರೂ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಜನರ ಮಧ್ಯೆ ಗಲಭೆಗಳಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿರುವುದರಿಂದ ಅವರ ವಿರುದಧ ಕ್ರಮ ಕೈಗೊಳ್ಳಬೇಕು ಎಂದು ಹನುಮಂತ ನೀಡಿರುವ ದೂರಿನಲ್ಲಿ ಆಪಾದಿಸಲಾಗಿದೆ.

Related Post

Leave a Reply

Your email address will not be published. Required fields are marked *